🔥 TRENDING मार्च 2027 तक पूरा हो जाएगा हम्मीर ब्र... भगवान महावीर का निर्वाणोत्सव मनाया, नि... शराब का कारण हुआ एक्सीडेंट वाराणसी को स्वच्छ सर्वेक्षण 2025‑26 मे... હિંમતનગર રેલવે સ્ટેશનમાં અસારવા-ઇન્દોર... शिविर में 140 रेलवे पेंशनरों के डिजिटल...
11 Nov 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ 5ನೇ ವಾರ್ಡ್‌ನಲ್ಲಿ ಐದು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರನಿವಾಸಿಗಳ ಮನವಿಗೆ ಸ್ಪಂದಿಸಿದ ಗ್ರಾ.ಪಂ. ಅಧಿಕಾರಿಗಳು; ಟ್ಯಾಂಕರ್ ಮೂಲಕ ನೀರು ಪೂರೈಕೆ

✍️ Reporter: Khaja Hussain 🗓 11 Nov 2026, 11:14 PM 👁 8
Share: 💬 WhatsApp 📘 Facebook 𝕏 Post
ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್

### ಜಾಲಹಳ್ಳಿ 5ನೇ ವಾರ್ಡ್‌ನಲ್ಲಿ ಐದು ದಿನಗಳ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರ

### ನಿವಾಸಿಗಳ ಮನವಿಗೆ ಸ್ಪಂದಿಸಿದ ಗ್ರಾ.ಪಂ. ಅಧಿಕಾರಿಗಳು; ಟ್ಯಾಂಕರ್ ಮೂಲಕ ನೀರು ಪೂರೈಕೆ

ಜಾಲಹಳ್ಳಿ, ನ. 11: ಜಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5ನೇ ವಾರ್ಡ್‌ನಲ್ಲಿ ಕಳೆದ ಐದು ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗದೆ ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದರು.

ವಾರ್ಡ್‌ನಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ಸಾರ್ವಜನಿಕರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಸಮರ್ಪಕವಾಗಿ ನೀರು ಪೂರೈಸುವಂತೆ ಗ್ರಾಮ ಪಂಚಾಯಿತಿ ಸದಸ್ಯೆ ರಜಿಯಾ ಬೇಗಂ ಹೈದರ್ ಸಾಬ್ ಉದ್ದಾರ್ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.

ಕಳೆದ ಐದು ದಿನಗಳಿಂದ ನೀರು ಪೂರೈಕೆಯಾಗದ ಕಾರಣ ಮನೆಗಳ ದೈನಂದಿನ ಚಟುವಟಿಕೆಗಳಿಗೂ ತೊಂದರೆಯಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ನೀರು ಪೂರೈಸಬೇಕು ಎಂದು ವಾರ್ಡ್ ನಿವಾಸಿಗಳು ಒತ್ತಾಯಿಸಿದ್ದರು.

ವಾರ್ಡ್ ನಿವಾಸಿಗಳ ಮನವಿಗೆ ಸ್ಪಂದಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಟ್ಯಾಂಕರ್ ಮೂಲಕ 5ನೇ ವಾರ್ಡ್‌ನಲ್ಲಿ ಕುಡಿಯುವ ನೀರು ಪೂರೈಕೆ ಮಾಡಿದರು. ಇದರಿಂದ ನಿವಾಸಿಗಳಿಗೆ ತಾತ್ಕಾಲಿಕವಾಗಿ ನೀರಿನ ಸಮಸ್ಯೆಯಿಂದ ಕೊಂಚ ನಿರಾಳತೆ ದೊರೆತಿದೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರೇಶ್ ಅರಕೇರಾ, ಸದಸ್ಯ ಶಿವಪ್ಪ ನಾಯಕ ಗಾಂಜಿ, ಮುಖಂಡರಾದ ಹುಸೇನ್ ನಾಸಿ, ರಂಗಪ್ಪ ತೊಗರಿ, ಅಮೀರ್ ಪಟೇಲ್, ಆರಿಫ್,ಮುಬಾರಕ್ ಆಗಬಾಯಿ, ರಾಜ್ ಮೊಹಮ್ಮದ್ ಸೇರಿದಂತೆ 5ನೇ ವಾರ್ಡ್‌ನ ಮಹಿಳೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App