🔥 TRENDING Nc turmoil over 10 disgruntled MLA hoi... ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿರುವ ರ... गुना के बीजी रोड पर सीमेंट ट्रैक्टर ट्... गुना के बीजी रोड पर सीमेंट ट्रैक्टर ट्... পুরুলিয়ার করমা গ্রামে চার প্রজন্মের ব... STIF Team Neutralises Five Drug Mafias...
04 Nov 2026•
ગુજરાતી मराठी ਪੰਜਾਬੀ বাংলা

ದೇವದುರ್ಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೆಸ್ ಮೀಟ್ - ನ.6 ರಂದು ಜಿಲ್ಲಾ ಕೇಂದ್ರಗಳಲ್ಲಿ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಕರೆ

✍️ Reporter: Ningappa 🗓 04 Nov 2026, 06:18 PM 👁 13
Share: 💬 WhatsApp 📘 Facebook 𝕏 Post

ದೇವದುರ್ಗ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ದೇವದುರ್ಗ ಮತ್ತು ಅರಕೇರಾ ತಾಲೂಕು ಸಮಿತಿಯಿಂದ ಪ್ರೆಸ್ ಮೀಟ್ - ನವೆಂಬರ್ 6 ರಂದು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಸೇರಿದಂತೆ 15 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧರಣಿ ಮತ್ತು ಪ್ರತಿಭಟನೆ

ದೇವದುರ್ಗದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರೆಸ್ ಮೀಟ್ - ನ.6 ರ ಪ್ರತಿಭಟನೆಗೆ ಕರೆ

ದೇವದುರ್ಗ, ನ. 4: ಇಂದು ದೇವದುರ್ಗ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ (ರಿ) 47/74/75 ದೇವದುರ್ಗ ಮತ್ತು ಅರಕೇರಾ ತಾಲೂಕು ಸಮಿತಿ ವತಿಯಿಂದ ಪ್ರೆಸ್ ಮೀಟ್ ನಡೆಸಲಾಯಿತು.

ತಾಲೂಕು ಸಮಿತಿ ಸಂಚಾಲಕರಾದ ಶಿವರಾಜ ಗಣಜಲಿ, ನಾಗರಾಜ ದೇವರಮನೆ ಅರಕೇರಾ ಹಾಗೂ ಎಲ್ಲ ಪದಾಧಿಕಾರಿಗಳು ಮತ್ತು ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್ ಅವರ ನೇತೃತ್ವದಲ್ಲಿ ಪ್ರೆಸ್ ಮೀಟ್ ನಡೆಯಿತು.

ನವೆಂಬರ್ 06, 2026 ರಂದು ನಡೆಯಲಿರುವ ಎಸ್.ಸಿ/ಎಸ್.ಟಿ ಮೀಸಲಾತಿ ಹೆಚ್ಚಳ ಮತ್ತು ಸುಮಾರು 15 ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮತ್ತು ಧರಣಿ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದ ಹಿನ್ನೆಲೆಯಲ್ಲಿ ಪ್ರೆಸ್ ಮೀಟ್ ಮಾಡಿ ಮಾಹಿತಿ ನೀಡಲಾಯಿತು.

ಈ ಹೋರಾಟವನ್ನು ಎಲ್ಲರೂ ಬಂದು ಯಶಸ್ವಿಗೊಳಿಸಬೇಕೆಂದು ಸಂಘಟನೆಯ ಮುಖಂಡರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
📲Get App