🔥 TRENDING Indore Markets Stay Open Until 2 AM on... ಅಜಯ್ ದೇವಗನ್ ಅಭಿನಯದ 'ದೃಶ್ಯಂ 3' 36 ದಿನಗಳ... ಕನ್ನಡ 'ರಾಮಾಯಣ' ಚಿತ್ರಕ್ಕೆ 53.8% ಥಿಯೇಟರ್... Gold Prices in Hyderabad on Nov 7: 22‑... ಕ್ರಿಸ್ಟಿಯಾನೋ ರೊನಾಲ್ಡೋ 23 ವರ್ಷಗಳ ಫುಟ್ಬಾ... Damoh SP Warns Firecracker Sellers of...
07 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನಲ್ಲಿ 60 ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಉದ್ಘಾಟನೆ

✍️ Reporter: Ningappa 🗓 07 Nov 2026, 03:22 PM 👁 8
Share: 💬 WhatsApp 📘 Facebook 𝕏 Post

ರಾಯಚೂರು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ 60 ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಪೂವಿತಾ ಎಸ್. - ಯುವಜನತೆ ಯಶಸ್ಸು ಸಾಧಿಸಿ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ - ತಮ್ಮ ಯುಪಿಎಸ್‌ಸಿ ಅನುಭವ ಹಂಚಿಕೊಂಡು 4 ವರ್ಷದ ಪರಿಶ್ರಮದಿಂದ ಐಎಎಸ್ ಆದ ಕಥೆ ಹೇಳಿದ ಡಿಸಿ

ರಾಯಚೂರು: ರಾಯಚೂರು ಜಿಲ್ಲೆಯ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವ ಮೂಲಕ ವೈಯಕ್ತಿಕ ಪ್ರಗತಿಯೊಂದಿಗೆ ಜಿಲ್ಲೆಯ ಅಭಿವೃದ್ಧಿಗೂ ಕೊಡುಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ಕರೆ ನೀಡಿದರು.

ರಾಯಚೂರು ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 60 ದಿನಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪೂರ್ವಸಿದ್ಧತಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಯಚೂರು ಜಿಲ್ಲೆಯ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಯುವಕರು ಉತ್ತಮ ಉದ್ಯೋಗಗಳನ್ನು ಪಡೆದುಕೊಳ್ಳುವುದರೊಂದಿಗೆ ಸ್ವಾವಲಂಬಿಗಳಾಗಿ, ಉದ್ಯಮಶೀಲತೆಯನ್ನು ಬೆಳೆಸಿಕೊಂಡು ಜಿಲ್ಲೆಯ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದರು.

ಜಿಲ್ಲೆಯ ಯುವಕರು ಸ್ವಾವಲಂಬಿಗಳಾಗಿ, ಉತ್ತಮ ಉದ್ಯೋಗಗಳನ್ನು ಪಡೆದು, ಉದ್ಯಮಿಗಳಾಗಿ ಬೆಳೆದು ಇತರರಿಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಂತಾಗಬೇಕು. ಯುವಜನರ ಸಾಧನೆ ಮತ್ತು ಕೊಡುಗೆಯೇ ಜಿಲ್ಲೆಯ ಅಭಿವೃದ್ಧಿಗೆ ನಿಜವಾದ ಶಕ್ತಿಯಾಗಬೇಕು ಎಂದರು.

ತಮ್ಮ ಯುಪಿಎಸ್‌ಸಿ ಪರೀಕ್ಷೆಯ ಅನುಭವ ಹಂಚಿಕೊಂಡ ಜಿಲ್ಲಾಧಿಕಾರಿಗಳು, ಮೊದಲ ಪ್ರಯತ್ನದಲ್ಲಿ ಪ್ರಿಲಿಮ್ಸ್ ಪರೀಕ್ಷೆಯಲ್ಲಿಯೂ ಯಶಸ್ಸು ಕಾಣದಿದ್ದರೂ ಸತತ ನಾಲ್ಕು ವರ್ಷಗಳ ಪರಿಶ್ರಮ, ಆತ್ಮವಿಶ್ವಾಸ ಮತ್ತು ದೃಢ ಸಂಕಲ್ಪದಿಂದ ಐಎಎಸ್ ಅಧಿಕಾರಿಯಾಗಲು ಸಾಧ್ಯವಾಯಿತು ಎಂದು ತಿಳಿಸಿದರು.

ಹೊರಗಿನವರ ಪ್ರೇರಣೆ ತಾತ್ಕಾಲಿಕ; ಸ್ವಯಂ ಪ್ರೇರಣೆ, ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನವೇ ಯಶಸ್ಸಿನ ನಿಜವಾದ ಸೂತ್ರ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ಯುವಜನರ ಯಶಸ್ಸು ಅವರ ಕುಟುಂಬಕ್ಕೆ ಮಾತ್ರವಲ್ಲದೆ, ಅವರ ಊರು, ಸಮಾಜ ಹಾಗೂ ಇಡೀ ಜಿಲ್ಲೆಗೆ ಪ್ರೇರಣೆಯಾಗಬೇಕು. ಇಂತಹ ತರಬೇತಿ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ಕೆಪಿಎಸ್‌ಸಿ, ಯುಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
📲Get App