🔥 TRENDING STIF Team Neutralises Five Drug Mafias... Kiran Raj Makes History: Wins 5th Best... India vs New Zealand: 1st ODI Live Str... नवादा में बिना लाइसेंस पटाखा बिक्री पर... रबी सीजन से पहले किसानों को बीज-खाद की... Peaky Blinders Boosts Birmingham Touri...
04 Nov 2026•
ગુજરાતી मराठी ਪੰਜਾਬੀ বাংলা

ಗಾಣದಾಳ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ತಾಲೂಕು ಬದಲಾವಣೆ ಕುರಿತು ನ.7ರಂದು ಗ್ರಾಮಸಭೆ ### ಅರಕೇರಾ ತಾಲೂಕಿನಲ್ಲೇ ಮುಂದುವರಿಸಬೇಕೇ ಅಥವಾ ದೇವದುರ್ಗ ತಾಲೂಕಿಗೆ ಸೇರ್ಪಡೆಗೊಳಿಸಬೇಕೇ ಎಂಬ ಬಗ್ಗೆ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹ

✍️ Reporter: Khaja Hussain 🗓 04 Nov 2026, 05:53 PM 👁 17
Watch on: 📘 Facebook
Share: 💬 WhatsApp 📘 Facebook 𝕏 Post
ದೇವದುರ್ಗ–ಅರಕೇರಾ | ಬ್ರೇಕಿಂಗ್ ನ್ಯೂಸ್

### ಗಾಣದಾಳ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ತಾಲೂಕು ಬದಲಾವಣೆ ಕುರಿತು ನ.7ರಂದು ಗ್ರಾಮಸಭೆ

### ಅರಕೇರಾ ತಾಲೂಕಿನಲ್ಲೇ ಮುಂದುವರಿಸಬೇಕೇ ಅಥವಾ ದೇವದುರ್ಗ ತಾಲೂಕಿಗೆ ಸೇರ್ಪಡೆಗೊಳಿಸಬೇಕೇ ಎಂಬ ಬಗ್ಗೆ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹ

ಅರಕೇರಾ, ನ. 4: ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿಗೆ ಒಳಪಟ್ಟಿರುವ ಗಾಣದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಸೇರ್ಪಡೆಗೊಳಿಸುವಂತೆ ಗ್ರಾಮಸ್ಥರು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ ನವೆಂಬರ್ 7ರಂದು ಗ್ರಾಮಸಭೆ ಆಯೋಜಿಸಲಾಗಿದೆ.

ಗಾಣದಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಿಕರು ಪ್ರತಿಭಟನೆ ನಡೆಸಿ, ದಿನಾಂಕ 12-10-2026ರಂದು ಸಲ್ಲಿಸಿದ ಮನವಿ ಪತ್ರದ ಮೇರೆಗೆ ಅರಕೇರಾ ಗ್ರೇಡ್-2 ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರ ನೇತೃತ್ವದಲ್ಲಿ ಗ್ರಾಮಸಭೆ ನಡೆಸಲು ನಿರ್ಧರಿಸಲಾಗಿದೆ.

ನವೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಗಾಣದಾಳ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸಭೆ ನಡೆಯಲಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಅರಕೇರಾ ತಾಲೂಕಿನಲ್ಲಿ ಮುಂದುವರಿಸಬೇಕೇ ಅಥವಾ ದೇವದುರ್ಗ ತಾಲೂಕಿಗೆ ಸೇರ್ಪಡೆಗೊಳಿಸಬೇಕೇ ಎಂಬ ಕುರಿತು ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಸಭೆಯಲ್ಲಿ ಕಡ್ಡಾಯವಾಗಿ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ತಹಶೀಲ್ದಾರ್ ಕಚೇರಿ ಪ್ರಕಟಣೆಯಲ್ಲಿ ಕೋರಲಾಗಿದೆ.

ಸಭೆಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಜಾಲಹಳ್ಳಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಉಪನಿರೀಕ್ಷಕರಿಗೆ ಸೂಚನೆ ನೀಡಲಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ.

ಜಿಲ್ಲಾಧಿಕಾರಿಗಳು ಹಾಗೂ ರಾಯಚೂರು ಸಹಾಯಕ ಆಯುಕ್ತರಿಗೆ ಸಭೆಯ ಕುರಿತು ಮಾಹಿತಿಗಾಗಿ ಪ್ರತಿಯನ್ನು ಸಲ್ಲಿಸಲಾಗಿದೆ.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App