🔥 TRENDING Iran Readies Forces to Counter Possibl... India's Kiren Rijiju Meets Bhutan PM t... Fitch Ratings warns US Fed policy coul... Pro‑Khalistan slogans graffitied on De... દિવાળી‑છઠ્ઠ પૂજા માટે સુરત‑ઉધનાથી ઉત્ત... Bhopal: Man Arrested After Beating Wom...
01 Nov 2026•
ગુજરાતી मराठी ਪੰਜਾਬੀ বাংলা

ಜನತಾ ಕಾಲೋನಿ ಸರ್ಕಾರಿ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

✍️ Reporter: Khaja Hussain 🗓 01 Nov 2026, 08:21 PM 👁 15
Share: 💬 WhatsApp 📘 Facebook 𝕏 Post
**ಜಾಲಹಳ್ಳಿ | ವಿಶೇಷ ವರದಿ**

# ಜನತಾ ಕಾಲೋನಿ ಸರ್ಕಾರಿ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ

### ಧ್ವಜಾರೋಹಣ ನೆರವೇರಿಸಿ ಕನ್ನಡ ನಾಡು-ನುಡಿಯ ಮಹತ್ವ ಸಾರಿದ ಗಣ್ಯರು; ಸಂಭ್ರಮದಿಂದ ನಡೆದ ಕಾರ್ಯಕ್ರಮ

**ಜಾಲಹಳ್ಳಿ, ನ. 1:** ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಜನತಾ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಂತರ ಎಸ್‌ಡಿಎಂಸಿ ಅಧ್ಯಕ್ಷ ಖುರ್ಶಿದ್ ಪಟೇಲ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರಾದ ಉಲ್ಫೇತುನಿಸ್ಸಾ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ಶಾಲೆಯ ಮುಖ್ಯೋಪಾಧ್ಯಾಯರು ಕಾರ್ಯಕ್ರಮಕ್ಕೆ ಆಗಮಿಸಿದ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖ್ಯ ಅತಿಥಿಗಳು, ಸಹಶಿಕ್ಷಕರು, ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕೇತರ ಸಿಬ್ಬಂದಿಯನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಎಂಸಿ ಅಧ್ಯಕ್ಷ ಖುರ್ಶಿದ್ ಪಟೇಲ್ ಅವರು ಕನ್ನಡ ನಾಡು-ನುಡಿಯ ಮಹತ್ವ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯ ಕುರಿತು ಪ್ರೇರಣಾದಾಯಕ ಮಾತುಗಳನ್ನಾಡಿದರು.ಕನ್ನಡ ಭಾಷೆ, ನಾಡು, ನುಡಿ, ಜಲ ರಕ್ಷಣೆ ಪ್ರತಿಯೊಬ್ಬರು ಜವಾಬ್ದಾರಿ ಯಿಂದ ನಡೆದು ಕೊಳ್ಳಬೇಕೆಂದು ಹೇಳಿದರು

ಬಾಕ್ಸ್ ನಲ್ಲಿ

ಜಾಲಹಳ್ಳಿ ಹೋಬಳಿ ಕರವೇ ಅಧ್ಯಕ್ಷ ತಮ್ಮಣ್ಣ ಹೆರುಂಡಿ ಅವರು ಮಾತನಾಡಿ, ಕನ್ನಡ ಭಾಷೆಯ ಉಳಿವು, ಬೆಳವಣಿಗೆ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ತಿಳಿಸಿದರು.

**ಗಣ್ಯರ ಉಪಸ್ಥಿತಿ:** ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಉಲ್ಫೇತುನಿಸ್ಸಾ, ಕರವೇ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ಜಾಲಹಳ್ಳಿ ಹೋಬಳಿ ಅಧ್ಯಕ್ಷ ತಮ್ಮಣ್ಣ ಹೆರುಂಡಿ, ಊರಿನ ಮುಖಂಡರಾದ ರಾಜ್ ಮೊಹಮ್ಮದ್ ಸುರ್ನೋಬತ್, ಪತ್ರಕರ್ತ ಖಾಜಾ ಹುಸೇನ್ ಬಾಬಾ, ಅತಿಥಿ ಶಿಕ್ಷಕ ಸೋಮಣ್ಣ ನಾಯಕ, ಎಸ್‌ಡಿಎಂಸಿ ಉಪಾಧ್ಯಕ್ಷ ಶಿವಪ್ಪ ಅಂಜಳ್, ಸದಸ್ಯೆ ಮೀನಾಕ್ಷಿ ರಂಗಪ್ಪ ಗಾಜಲಿನ್ನಿ, ಅತಿಥಿ ಸಿಬ್ಬಂದಿಗಳಾದ ಮಲ್ಲಮ್ಮ ಹಾಗೂ ದೊಡ್ಡಮ್ಮ ಯಲ್ಲಮ್ಮ ಸೇರಿದಂತೆ ಊರಿನ ಗಣ್ಯರು, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಹಾಗೂ ಗಣ್ಯರ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು.

**ವರದಿ: ಖಾಜಾ ಹುಸೇನ್ ಬಾಬಾ, ಪತ್ರಕರ್ತರು, ಜಾಲಹಳ್ಳಿ.**
📲Get App