🔥 TRENDING बीकानेर के रणजीतपुरा थाना ने ऑपरेशन नी... उदयपुर में 15 की जगह 16 वोट डाले, उप-प... SMS हॉस्पिटल में जिंदा युवक को थमा दिय... फैक्ट्री में 14 घंट े काम, 7 दिन की मज... 10 करोड़ के हीरे जड़ित ड्रेस में कमी ईशा... Uttarakhand Residents Protest Proposed...
29 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನಲ್ಲಿ KKRDB ನೂತನ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸನ್ಮಾನ - ಆರೋಗ್ಯ ಸಚಿವ ಯು.ಟಿ. ಖಾದರ್ ಅಭಿನಂದನೆ - ಪ್ರತಿ ವರ್ಷ 5,000 ಕೋಟಿ ಅನುದಾನ - ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಶುಭ ಹಾರೈಕೆ

✍️ Reporter: Ningappa 🗓 29 Nov 2026, 07:59 PM 👁 33
Watch on: 📘 Facebook
Share: 💬 WhatsApp 📘 Facebook 𝕏 Post

ರಾಯಚೂರಿನಲ್ಲಿ KKRDB ನೂತನ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸನ್ಮಾನ - ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕಾರ್ಯಕ್ರಮ - ಆರೋಗ್ಯ ಸಚಿವ ಯು.ಟಿ. ಖಾದರ್ ಅಭಿನಂದನೆ - ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರತಿ ವರ್ಷ 5,000 ಕೋಟಿ ಅನುದಾನ - ಶಿಕ್ಷಣ, ಆರೋಗ್ಯ, ಮೂಲಸೌಕರ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಪ್ರಗತಿಗೆ ಶುಭ ಹಾರೈಕೆ

ರಾಯಚೂರಿನಲ್ಲಿ KKRDB ನೂತನ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ಸನ್ಮಾನ

ರಾಯಚೂರು: ರಾಯಚೂರಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಇಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (KKRDB) ನೂತನ ಅಧ್ಯಕ್ಷರಾದ ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ಅವರನ್ನು ಸನ್ಮಾನಿಸಿ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಅಭಿನಂದಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರತಿ ವರ್ಷ 5,000 ಕೋಟಿ ರೂ. ಅನುದಾನ ನೀಡುತ್ತಿದೆ. ಈ ಅನುದಾನ ಸರಿಯಾದ ಸಮಯದಲ್ಲಿ ಸದ್ಬಳಕೆಯಾಗಿ, ಈ ಭಾಗದ ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಇನ್ನಷ್ಟು ಪ್ರಗತಿ ಕಾಣಲಿ. ಬಸನಗೌಡ ದದ್ದಲ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎನ್.ಎಸ್. ಬೋಸರಾಜು ಹಾಗೂ ಪಕ್ಷದ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
📲Get App