🔥 TRENDING Meghalaya CM Inaugurates 50-Bed Extens... Foodgrain Supply Set to Resume After N... Meghalaya ANTF Seizes Heroin Worth Rs... Mohali: Yoga Made a Way of Life as 150... Train Noise Masks Shop Shutter Break-i... Placement Camp Begins in Mohali to Off...
22 Sep 2026
ગુજરાતી मराठी ਪੰਜਾਬੀ বাংলা
ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೆ ವಿದ್ಯಾರ್ಥಿಗಳು ಮುಂದಾಗಲಿ: ಡಾ. ಯು.ಎಸ್. ಮಹಾಬಲೇಶ್ವರ

ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಗೆ ವಿದ್ಯಾರ್ಥಿಗಳು ಮುಂದಾಗಲಿ: ಡಾ. ಯು.ಎಸ್. ಮಹಾಬಲೇಶ್ವರ

✍️ Reporter: Viswanatha D R 🗓 07 Sep 2026, 10:29 PM 👁 29
Share: 💬 WhatsApp 📘 Facebook 𝕏 Post
ದಾವಣಗೆರೆ, ಸೆ. 7: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ವತಿಯಿಂದ ನಗರದ ಕುವೆಂಪು ಭವನದಲ್ಲಿ ಸ್ವಾಗತ ಸಮಾರಂಭ ಆಯೋಜಿಸಲಾಗಿತ್ತು.

ದಾವಣಗೆರೆ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ನಿರ್ದೇಶಕ ಡಾ. ಯು.ಎಸ್. ಮಹಾಬಲೇಶ್ವರವರು ಮುಖ್ಯ ಅತಿಥಿಯಾಗಿ ಮಾತನಾಡಿ, ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಇರುವ ವಿವಿಧ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ವ್ಯಾಸಂಗ ಮಾಡಿದ ಅನೇಕರು ದೇಶದಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ. ಅವರ ಸಾಧನೆಗಳನ್ನು ಸ್ಫೂರ್ತಿಯಾಗಿಸಿಕೊಂಡು ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ತಂದೆ–ತಾಯಿ ಹಾಗೂ ಬೋಧಿಸಿದ ಶಿಕ್ಷಕರಿಗೆ ಗೌರವ ತರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಕರಿಬಸಪ್ಪ ಟಿ. ಮಾತನಾಡಿ, ಕಾಲೇಜು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆದಿರುವುದು ಹೆಮ್ಮೆಯ ಸಂಗತಿ. ಉತ್ತಮ ಬೋಧಕವೃಂದದ ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಇದಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿಜ್ಞಾನ ಕ್ಷೇತ್ರದಲ್ಲಿ ಹೊಸ ಸಾಧನೆಗಳನ್ನು ಮಾಡಬೇಕು ಎಂದು ಕರೆ ನೀಡಿದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕ ಡಾ. ಭೀಮಪ್ಪ ಎಂ.ಪಿ. ವಿಜ್ಞಾನದ ಮೂಲ ತತ್ವಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕುವೆಂಪು ಭವನದ ಸಂಚಾಲಕ ವಾಮದೇವಪ್ಪ ಮಾತನಾಡಿ, ಅನ್ವೇಷಣೆ ಮತ್ತು ಸಂಶೋಧನೆಯ ನಡುವಿನ ವ್ಯತ್ಯಾಸವನ್ನು ವಿವರಿಸಿ, ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ವಿಜ್ಞಾನಿಗಳಾಗುವ ಗುರಿ ಹೊಂದಬೇಕು ಎಂದರು.

ಡಾ. ಪ್ರಭು ಕೆ. ಇಂಗಳಗೊಂದಿ ಮುಖ್ಯಸ್ಥರು,ಭೌತಶಾಸ್ತ್ರ ವಿಭಾಗ, ಪ್ರಾಸ್ತಾವಿಕ ನುಡಿಗಳೊಂದಿಗೆ ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಶಿವರಾಜು ಎನ್. ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಗೌಸಖಾನ್, ಗಣಕಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ ಗಾಯತ್ರಿ, ದೈಹಿಕ ಶಿಕ್ಷಣ ನಿರ್ದೇಶಕಿ ಶ್ರೀಮತಿ ಸುನೀತಾ, ಕಚೇರಿ ಅಧೀಕ್ಷಕ ಸಂತೋಷ್ ಜಿ. ಹೆಗಡೆ ಸೇರಿದಂತೆ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
📲Get App