ಶಿಕ್ಷಕರ ದಿನಾಚರಣೆ: ವಿದ್ಯಾರ್ಥಿಗಳಿಂದ ಗುರುಗಳಿಗೆ ಗೌರವ ಸಮರ್ಪಣೆ
.
ಹರಿಹರ, ಸೆ. 7: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎಸ್ಸಿ. ವಿದ್ಯಾರ್ಥಿಗಳ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಸೇವೆ ಹಾಗೂ ಮಾರ್ಗದರ್ಶನವನ್ನು ಶ್ಲಾಘಿಸಿ, ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಿದರು. ಶಿಕ್ಷಕರು ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ ಹಾಗೂ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಶಕುಂತಲಾ ಎನ್. ಮಾತನಾಡಿ, ಆಧುನಿಕ ಹಾಗೂ ಜಾಗತೀಕರಣದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯವಾದ ಸಲಹೆ, ಮಾರ್ಗದರ್ಶನ ಹಾಗೂ ಕೌಶಲಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ, ಸ್ವಾಗತ ಹಾಗೂ ವಂದನಾರ್ಪಣೆಯನ್ನು ನೆರವೇರಿಸಿದರು.