🔥 ट्रेंडिंग उधयनिधि स्टालिन ने अभिनेता विजय को ‘डम... सितंबर में बिजली की मांग में चढ़ाव, तम... मोहन यादव ने कहा, समुद्र ने गांधी परिव... एमपी सरकार ने 137 पुलिस अधिकारियों को... सीजेपी संस्थापक की आलोचना पर डिपके ने... વિરમગામના પોપટ ચોકડીમાં ન્યૂ ગણેશ સમિત...
14 सित. 2026
ગુજરાતી मराठी ਪੰਜਾਬੀ বাংলা

ಜಾಲಹಳ್ಳಿಯಲ್ಲಿ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಶಾಸಕರಿಗೆ ಮನವಿ

✍️ रिपोर्टर: Khajahussain baba Jalahalli 🗓 09 सित. 2026, 02:56 PM 👁 201
यहाँ देखें: ▶️ YouTube
शेयर करें: 💬 WhatsApp 📘 Facebook 𝕏 Post
📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್

ಜಾಲಹಳ್ಳಿಯಲ್ಲಿ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಶಾಸಕರಿಗೆ ಮನವಿ

ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಕಲ್ಪಿಸುವ ಭರವಸೆ

ಜಾಲಹಳ್ಳಿ, ಸೆ. 8: ಜಾಲಹಳ್ಳಿ ಗ್ರಾಮದಲ್ಲಿ ಬಾಲಕಿಯರ ವಸತಿ ನಿಲಯ ನಿರ್ಮಿಸುವುದು ಸೇರಿದಂತೆ ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ, ಜಾಲಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರೇಶ್ ಅರಕೇರಿ ಅವರು ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ ಅವರಿಗೆ ಮನವಿ ಸಲ್ಲಿಸಿದರು.

ಜಾಲಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ವಿಶೇಷವಾಗಿ ಬಾಲಕಿಯರಿಗೆ ಸುರಕ್ಷಿತ ವಸತಿ ಸೌಲಭ್ಯ ಕಲ್ಪಿಸುವ ಅಗತ್ಯವಿದ್ದು, ಜಾಲಹಳ್ಳಿಯಲ್ಲಿ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಗ್ರಾಮದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರು ಶಿಕ್ಷಣವನ್ನು ನಿರಂತರವಾಗಿ ಮುಂದುವರಿಸಲು ಅನುಕೂಲವಾಗುವಂತೆ ವಸತಿ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಿದರೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ವೀರೇಶ್ ಅರಕೇರಿ ಅವರು ಶಾಸಕರ ಗಮನಕ್ಕೆ ತಂದರು.

ಬಾಕ್ಸ್ ನಲ್ಲಿ

«📦 ಶಾಸಕರಿಂದ ಉತ್ತಮ ಸ್ಪಂದನೆ

ಮನವಿಯನ್ನು ಸ್ವೀಕರಿಸಿದ ಶಾಸಕಿ ಕರೆಮ್ಮ ಜಿ. ನಾಯಕ ಅವರು ವಿಷಯವನ್ನು ಪರಿಶೀಲಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.»

ಬಾಕ್ಸ್ ನಲ್ಲಿ

ಈ ಸಂದರ್ಭದಲ್ಲಿ ಜಾಲಹಳ್ಳಿ ಗ್ರಾಮದ ಮುಖಂಡರಿಂದ ಶಾಸಕಿ ಕರೆಮ್ಮ ಜಿ. ನಾಯಕ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಊರಿನ ಹಿರಿಯ ಮುಖಂಡರಾದ ಶ್ರೀಧರ್ ದೇಸಾಯಿ, ಶಂಕರಗೌಡ ಮಾಲಿ ಪಾಟೀಲ್, ವೆಂಕಪ್ಪ ತೋಟದ, ಜಾಲಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೀರೇಶ್ ಅರಕೇರಿ, ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ ರಹಿಮಾನ್ ಖುರೇಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App