🔥 TRENDING 14-Year-Old Shivpuri Girl Operated for... मान्यता विद्यापीठाची, प्रमाणपत्र AI चं... अौरैया के मुरादगंज में शिव शंभू स्वीट... উত্তর দিনাজপুরের কালিয়াগঞ্জ ব্লকে লক্... ਅੰਮ੍ਰਿਤਸਰ ਦੇ ਸ਼੍ਰੀ ਦਰਬਾਰ ਸਾਹਿਬ ਵਿੱਚ ਪਹਿ... ಜಾಲಹಳ್ಳಿಯಲ್ಲಿ ಸೆ.19ಕ್ಕೆ ಜಿಲ್ಲಾ ಮಟ್ಟದ ಶ...
13 Sep 2026
ગુજરાતી मराठी ਪੰਜਾਬੀ বাংলা
ಜಾಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಶಾಸಕರಿಗೆ ಕರವೇ ಮನವಿ

ಜಾಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಶಾಸಕರಿಗೆ ಕರವೇ ಮನವಿ

✍️ Reporter: Khajahussain baba Jalahalli 🗓 13 Sep 2026, 08:31 PM 👁 11
Share: 💬 WhatsApp 📘 Facebook 𝕏 Post
📰 ಜಾಲಹಳ್ಳಿ–ದೇವದುರ್ಗ | ಬ್ರೇಕಿಂಗ್ ನ್ಯೂಸ್

ಜಾಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಶಾಸಕರಿಗೆ ಕರವೇ ಮನವಿ

ವಿಧಾನಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಸರ್ಕಾರದ ಗಮನಕ್ಕೆ ತರಲು ಕರವೇ ಒತ್ತಾಯ

ಜಾಲಹಳ್ಳಿ, ಸೆ.12: ದೇವದುರ್ಗ ತಾಲೂಕಿನ ಪ್ರಮುಖ ಹಾಗೂ ಅತಿ ದೊಡ್ಡ ಪಟ್ಟಣಗಳಲ್ಲಿ ಒಂದಾಗಿರುವ ಜಾಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ದೇವದುರ್ಗ ತಾಲೂಕು ಘಟಕ ಹಾಗೂ ಜಾಲಹಳ್ಳಿ ಸಾರ್ವಜನಿಕರ ಪರವಾಗಿ ದೇವದುರ್ಗ ಕ್ಷೇತ್ರದ ಶಾಸಕಿ ಶ್ರೀಮತಿ ಕರೇಮ್ಮ ಜಿ. ನಾಯಕ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಜಾಲಹಳ್ಳಿ ಪಟ್ಟಣವು ದಿನದಿಂದ ದಿನಕ್ಕೆ ವೇಗವಾಗಿ ಅಭಿವೃದ್ಧಿಯಾಗುತ್ತಿದ್ದು, ಜನಸಂಖ್ಯೆ ಹಾಗೂ ವಾಣಿಜ್ಯ ಚಟುವಟಿಕೆಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಸುಮಾರು 20,000ರಿಂದ 25,000 ಜನಸಂಖ್ಯೆ ಹೊಂದಿರುವ ಜಾಲಹಳ್ಳಿ ಗ್ರಾಮ ಪಂಚಾಯಿತಿಯು ರಾಜ್ಯದಲ್ಲೇ ಅತಿ ಹೆಚ್ಚು, ಅಂದರೆ 33 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಪ್ರಸ್ತುತ ಗ್ರಾಮ ಪಂಚಾಯಿತಿಗೆ ಲಭ್ಯವಾಗುತ್ತಿರುವ ಅನುದಾನ ಹಾಗೂ ಆಡಳಿತ ವ್ಯವಸ್ಥೆಯು ಪಟ್ಟಣದ ಹೆಚ್ಚುತ್ತಿರುವ ಅಗತ್ಯಗಳಿಗೆ ಸಮರ್ಪಕವಾಗಿ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಸ್ತೆಗಳು, ಚರಂಡಿ ವ್ಯವಸ್ಥೆ, ಕುಡಿಯುವ ನೀರು, ಬೀದಿ ದೀಪಗಳು, ನೈರ್ಮಲ್ಯ, ಸಾರ್ವಜನಿಕ ಆರೋಗ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಜಾಲಹಳ್ಳಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಕರವೇ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದರು.

ಈ ಹಿಂದೆ ಜಾಲಹಳ್ಳಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆದಿದ್ದರೂ, ನ್ಯಾಯಾಲಯದ ಮೊರೆ ಹೋಗಿದ್ದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಬಾಕಿ ಉಳಿದಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಆದ್ದರಿಂದ ಶಾಸಕರು ಈ ವಿಷಯವನ್ನು ಕರ್ನಾಟಕ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರದ ಗಮನಕ್ಕೆ ತರಬೇಕು. ಅಲ್ಲದೆ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣವನ್ನು ಕಾನೂನುಬದ್ಧವಾಗಿ ಇತ್ಯರ್ಥಗೊಳಿಸಿ, ಜಾಲಹಳ್ಳಿಯನ್ನು ಪುರಸಭೆಯಾಗಿ ಘೋಷಿಸುವ ಪ್ರಕ್ರಿಯೆಯನ್ನು ಮುಂದುವರಿಸಲು ಸಂಬಂಧಪಟ್ಟ ಇಲಾಖೆಗೆ ಅಗತ್ಯ ನಿರ್ದೇಶನ ನೀಡುವಂತೆ ಸರ್ಕಾರವನ್ನು ಒತ್ತಾಯಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ನಂದಪ್ಪ ಪಿ. ಮಡ್ಡಿ, ಪ್ರಧಾನ ಕಾರ್ಯದರ್ಶಿ ಗುರುನಾಥ್ ರೆಡ್ಡಿ ಎಂ., ತಾಲೂಕು ಸಂಚಾಲಕ ಭೀಮಣ್ಣ ನಾಯಕ, ಕಾನೂನು ಸಲಹೆಗಾರ ನಂದಪ್ಪ ಎಸ್., ವಿಕಲಚೇತನ ಜಿ.ಎಚ್.ಒ. ಅಧ್ಯಕ್ಷ ಭೀಮರಾಯ ಎಂ. ನಾಯಕ, ಶಾಂತಪ್ಪ ಬಳೆ ಸಾಹು, ಜಾಲಹಳ್ಳಿ ಹೋಬಳಿ ಘಟಕದ ಅಧ್ಯಕ್ಷ ತಮ್ಮಣ್ಣ ಹೆರುಂಡಿ, ಯುವ ಘಟಕದ ಅಧ್ಯಕ್ಷ ಮಲ್ಲು ತೆಗ್ಗಳ್ಳಿ, ಹೋಬಳಿ ಉಪಾಧ್ಯಕ್ಷ ಅಮರೇಶ ಪಾಟೀಲ, ಗ್ರಾಮ ಘಟಕದ ಉಪಾಧ್ಯಕ್ಷ ವೆಂಕಟೇಶ ಜಗರಕಲ್, ಶಿವು ಯರಗುಡ್ಡ, ಮಲ್ಲಿಕಾರ್ಜುನ ಹಡಪದ್, ಮಲ್ಲು ಹ ಡಪದ್, ಖಾಜಾ ಹುಸೇನ್ ಆರ್ತಿ , ಹೈದರ್ ಸಾಬ್ ಮುಲ್ಲಾ, ಬಾಳಪ್ಪ ಭಾವಿಮನಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App