🔥 TRENDING અંબાજી ભાદરવી પૂનમ મેળામાં 27 મેડિકલ ક... સુરતમાં વરસાદ માટે લાલ એલર્ટ જાહેર અનોખો પ્રેમ.... Fire Breaks Out in Punjab Roadways Bus... સુરેન્દ્રનગરના લખતર તાલુકાના ભાલાળા ગા... Welder from Gopalganj dies while being...
14 Sep 2026
ગુજરાતી मराठी ਪੰਜਾਬੀ বাংলা

ವಿದ್ಯಾರ್ಥಿಗಳೊಂದಿಗೆ ಊಟ ಮಾಡಿ ಹಾಸ್ಟೆಲ್ ಸೌಲಭ್ಯ ಪರಿಶೀಲಿಸಿದ ಸಿಎಂ

✍️ Reporter: ಮಂಜುನಾಥ ಹೂಡೇಂ 🗓 14 Sep 2026, 12:52 PM 👁 5
Share: 💬 WhatsApp 📘 Facebook 𝕏 Post

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ

ಕನಕಪುರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಕಾಲೇಜಿನ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸ್ವತಃ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.
ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ, ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ವಸತಿ ವ್ಯವಸ್ಥೆ, ಆಹಾರದ ಗುಣಮಟ್ಟ, ಮೂಲಭೂತ ಸೌಕರ್ಯಗಳು ಹಾಗೂ ವಿದ್ಯಾರ್ಥಿಗಳಿಗೆ ದೊರೆಯುತ್ತಿರುವ ವಿವಿಧ ಸರ್ಕಾರಿ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು. ಉಚಿತ ಬಸ್ ಪಾಸ್, ವಿದ್ಯಾರ್ಥಿವೇತನ ಸೇರಿದಂತೆ ಸರ್ಕಾರದಿಂದ ದೊರೆಯುತ್ತಿರುವ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ವಿದ್ಯಾರ್ಥಿಗಳಿಂದಲೇ ವಿಚಾರಿಸಿದರು
📲Get App