🔥 TRENDING धनरूआ में 12 वर्षीय बच्ची की लाश बरामद... Businessman Gulzar Singh Killed in Day... Librarian's Suspicious Death in Amrits... Delhi Road Rage: Father of Bike Victim... Married Woman Drowns in Dhava River Du... हरितालिका तीज: शिव‑पार्वती के पवित्र प...
14 Sep 2026
ગુજરાતી मराठी ਪੰਜਾਬੀ বাংলা

ಪ್ರಜಾಸೇವಾ ಆಂದೋಲನದಿಂದ ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: ಸಚಿವ ಬಸವರಾಜ ರಾಯರೆಡ್ಡಿ

✍️ Reporter: ಮಂಜುನಾಥ ಹೂಡೇಂ 🗓 14 Sep 2026, 09:42 PM 👁 6
Share: 💬 WhatsApp 📘 Facebook 𝕏 Post

ಮಂಗಳೂರು ಗ್ರಾಮದಲ್ಲಿ `ಪ್ರಜಾಸೇವಾ ಆಂದೋಲನ

ಕೊಪ್ಪಳ: ಪ್ರಜಾಸೇವಾ ಆಂದೋಲನದಿಂದ ಜನರ ಸಮಸ್ಯೆಗಳಿಗೆ ಸರ್ಕಾರದಿಂದ ತ್ವರಿತವಾಗಿ ಸ್ಪಂದನೆ ದೊರೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ಹೇಳಿದರು.
ಸಾರ್ವಜನಿಕರ ಕುಂದು-ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕುಕನೂರು ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಸೆಪ್ಟೆಂಬರ್ 12ರಂದು (ಶನಿವಾರ) ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ `ಪ್ರಜಾಸೇವಾ ಆಂದೋಲನ' ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಿ, ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಪ್ರತಿ ಶನಿವಾರ ತಾಲೂಕು ಕೇಂದ್ರಗಳಲ್ಲಿ ‘ಪ್ರಜಾ ಸೇವೆ ಆಂದೋಲನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿ ತಿಂಗಳ ಮೊದಲ ಮತ್ತು ಎರಡನೇ ಶನಿವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರ ಅರ್ಜಿಗಳು ಹಾಗೂ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಸ್ವೀಕರಿಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಪರಿಹಾರ ಒದಗಿಸುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆ ಹೆಚ್ಚಿಸುವುದು ಸರ್ಕಾರದ ಮಹತ್ವಾಕಾಂಕ್ಷೆಯ ಉದ್ದೇಶವಾಗಿದೆ ಎಂದರು.
ಮಂಗಳೂರು ಗ್ರಾಮದಲ್ಲಿ ಬಹುದಿನಗಳಿಂದ ಸಾರ್ವಜನಿಕರು ಒತ್ತಾಯಿಸುತ್ತಿದ್ದ ಹಕ್ಕುಪತ್ರ ನೀಡುವ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ರಾಜ್ಯದಲ್ಲಿ ಉನ್ನತ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ತಾಂತ್ರಿಕ ಕೌಶಲ್ಯ ಹೊಂದಿರುವ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಬೇವೂರ ಗ್ರಾಮದಲ್ಲಿ ಬಿಸಿಎ ಕಾಲೇಜು ಹಾಗೂ 300 ವಿದ್ಯಾರ್ಥಿಗಳಿಗೆ ವಸತಿ ನಿಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಮಂಗಳೂರು ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರಜಾ ಸೇವೆಯೇ ಜನಾರ್ದನ ಸೇವೆ ಎಂಬ ಆಶಯದೊಂದಿಗೆ ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ತಮ್ಮ ಪ್ರಮುಖ ಗುರಿಯಾಗಿದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಹಿಟ್ನಾಳ, ಜಿ.ಪಂ ಸಿಇಒ ವರ್ಣೀತ್ ನೇಗಿ, ಕುಕನೂರ ತಹಶೀಲ್ದಾರರಾದ ಬಸವರಾಜ ಬೆಣ್ಣೆ ಶಿರೂರ, ಇಒ ಬೆಟದಪ್ಪ, ಬಿಇಓ ಶ್ರೀನಿವಾಸ ಬಿ., ಕುಕನೂರ ತಾ.ಪಂ ಸಹಾಯಕ ನಿರ್ದೇಶಕಶರಣಪ್ಪ ಕೆಳಗಿನ ಮನಿ, ತಾಲೂಕು ಮಟ್ಟದ ಅಧಿಕಾರಿಗಳು, ಇತರೆ ಜನಪ್ರತಿನಿಧಿಗಳು ಮಂಗಳೂರು ಹೋಬಳಿಯ ವಿವಿಧ ಗ್ರಾ.ಪಂ.ಗಳ ಪಿಡಿಒಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
*ವಿವಿಧ ಕಾರ್ಯಕ್ರಮಗಳು:* ಸಚಿವರಾದ ಬಸವರಾಜ ರಾಯರೆಡ್ಡಿ ಅವರು, ಹಿರೇಬಿಡನಾಳ, ಕುದ್ರಿಮೋತಿ, ನೆಲಜೇರಿ, ವಣಗೇರಿ & ಗುತ್ತೂರ, ಬೇವೂರ ಗ್ರಾಮಗಳಲ್ಲಿ ಜನಸಂದರ್ಶನ ನಡೆಸಿ, ಕುದ್ರಿಮೋತಿ ಗ್ರಾಮದ ಸ.ಹಿ.ಪ್ರಾ. ಶಾಲೆಯ 2 ತರಗತಿ ಕೊಠಡಿಗಳ ಉದ್ಘಾಟನೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪಿಯುಸಿ ವಿಭಾಗದ ಕಟ್ಟಡಗಳ ಉದ್ಘಾಟನೆ ನೆರವೇರಿಸಿದರು. ಇದಲ್ಲದೆ ನೆಲಜೇರಿ ಗ್ರಾಮದ ನೂತನ ಪ್ರೌಢ ಶಾಲಾ ಕಾಮಗಾರಿಯ ಶಂಕುಸ್ಥಾಪನೆ, ಗುತ್ತೂರ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಸಚಿವರು ನೆರವೇರಿಸಿದರು.
📲Get App