🔥 ट्रेंडिंग कबिनेट ने यूपी में 4-लेन राजमार्ग परिय... विदेश में बसे गैंगस्टर हिमांशु भाऊ ने... सांसद- देवेश चंद्र ठाकुर ने कहा - लगेग... गंगा के बढ़ते जलस्तर से राजमहल क्रूज़... भोपाल के प्रेमपुरा में शराबी बेटे ने क... कारधानी हत्या के आरोपी ने अपराध दोहराय...
15 सित. 2026
ગુજરાતી मराठी ਪੰਜਾਬੀ বাংলা

ಪ್ರಜಾಪ್ರಭುತ್ವದ ಮೌಲ್ಯಗಳ ಅರಿವಿಗೆ ಜಾಗೃತಿ ಜಾಥಾ

✍️ रिपोर्टर: ಮಂಜುನಾಥ ಹೂಡೇಂ 🗓 15 सित. 2026, 08:45 PM 👁 8
यहाँ देखें: ▶️ YouTube
शेयर करें: 💬 WhatsApp 📘 Facebook 𝕏 Post

ತಾಲೂಕು ಆಡಳಿತ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ

ಕೂಡ್ಲಿಗಿ: ತಾಲೂಕು ಆಡಳಿತ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಯುವ ಸಂಸತ್ ಕಾರ್ಯಕ್ರಮದ ಪ್ರಯುಕ್ತ ಮಂಗಳವಾರ ಪಟ್ಟಣದಲ್ಲಿ ಪ್ರಜಾಪ್ರಭುತ್ವ ಜಾಗೃತಿ ಜಾಥಾ ನಡೆಯಿತು.
ಪಟ್ಟಣದ ಗುಡೇಕೋಟೆ ರಸ್ತೆಯ ಬಸವೇಶ್ವರ ವೃತ್ತದಲ್ಲಿ ಜಾಥಾಕ್ಕೆ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಹಾಗೂ ತಾಪಂ ಇಒ ನರಸಪ್ಪ ಚಾಲನೆ ನೀಡಿದರು. ಬಸವೇಶ್ವರ ವೃತ್ತದಿಂದ ಆರಂಭಗೊಂಡ ಜಾಥಾವು ಮುಖ್ಯರಸ್ತೆಯ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ರಾಜವೀರ ಮದಕರಿ ನಾಯಕ ವೃತ್ತದ ಮೂಲಕ ಸಾಗಿ ಮರಳಿ ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಂಡಿತು. ಬಳಿಕ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ತಹಸೀಲ್ದಾರ್ ವಿ.ಕೆ.ನೇತ್ರಾವತಿ ಮಾತನಾಡಿ, ಭಾರತವು ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಸಂವಿಧಾನದ ಆಶಯಗಳು, ಮೌಲ್ಯಗಳು ಹಾಗೂ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಪ್ರಜಾಪ್ರಭುತ್ವ ದಿನಾಚರಣೆ ಸ್ಫೂರ್ತಿ ನೀಡಲಿದೆ ಎಂದು ಹೇಳಿದರು.
ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ತಾಪಂ ಇಒ ನರಸಪ್ಪ, ಬಿಇಒ ಮೈಲೇಶ್ ಬೇವೂರು, ತಾಲೂಕು ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಫಕೀರಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ವೆಂಕಟೇಶ್, ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್, ವಕೀಲರ ಸಂಘದ ಅಧ್ಯಕ್ಷ ಹೊನ್ನೂರಪ್ಪ, ಮುಖಂಡರಾದ ಗುಣಸಾಗರ ಕೃಷ್ಣಪ್ಪ ಹಾಗೂ ಹಿರೇಕುಂಬಳಗುಂಟೆ ಉಮೇಶ್ ಮಾತನಾಡಿದರು.
ಈ ಸಂದರ್ಭದಲ್ಲಿ ಸಿದ್ದಪ್ಪ, ವಕೀಲ ಡಿ.ಎಚ್.ದುರುಗೇಶ್, ಕಾಟೇರ್ ಹಾಲೇಶ್, ಬಂಡೆ ರಾಘವೇಂದ್ರ, ಕಲ್ಲಹಳ್ಳಿ ಬಸಪ್ಪ, ಸಾಲುಮನಿ ರಾಘವೇಂದ್ರ, ಟಿಎಚ್‌ಒ ಎಸ್.ಪಿ.ಪ್ರದೀಪ್, ಪಿಡಬ್ಲ್ಯುಡಿ ಎಇಇ ಆಲೂರು ಬಸವರೆಡ್ಡಿ, ಕೆ.ಎಸ್.ವೀರೇಶ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
📲Get App