ಸರಕಾರಿ ಬಾಲಕಿಯರ ಪ್ರೌಢ ಶಾಲೆ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
Watch on:
▶️ YouTube
ದೇವದುರ್ಗ ಸರಕಾರಿ ಬಾಲಕಿಯರ ಪ್ರೌಢ ಶಾಲೆ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ
ನೀಡ್ 24 ನ್ಯೂಸ್
ದೇವದುರ್ಗ,ಸೆ.15-: ಪಟ್ಟಣದ ಹೊರವಲಯದಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ
ಮಟ್ಟದ ಪ್ರೌಢ ಶಾಲಾ ಕ್ರೀಡಾಕೂಟದಲ್ಲಿ ಸರಕಾರಿ ಬಾಲಕಿಯರ ಪ್ರೌಢ ಶಾಲಾ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.200 ಮೀ ಓಟದಲ್ಲಿ ಕುಮಾರಿ ಮಹಾಂತಮ್ಮ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಅದೇ ರೀತಿ 4*400 ಮೀ. ರಿಲೇ ಓಟದಲ್ಲಿ ವಿದ್ಯಾರ್ಥಿನಿಯರಾದ ಕುಮಾರಿ ಗಂಗಮ್ಮ, ಸವಿತಾ, ಅಕ್ಷತಾ, ದೇವಮ್ಮ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ತಾಲೂಕು ದೈಹಿಕ ಶಿಕ್ಷಣ ಅಧಿಕಾರಿ ಬಾಲಪ್ಪ ಭಾವಿಮನಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಪ್ರಮಾಣ ಪತ್ರ ವಿತರಿಸಿ, ಶುಭ ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಹಾಗೂ ಮಾರ್ಗದರ್ಶಕಿ ಮಮತಾ ಆದಿ, ದೈಹಿಕ ಶಿಕ್ಷಣ ಶಿಕ್ಷಕರಾದ ದಾವಲ್ ಸಾಬ್ ಬಂಡಿ, ಬಸವರಾಜ ಯಾಟಗಲ್, ಲೋಕೇಶ, ವ್ಯವಸ್ಥಾಪಕಿ ಸುಮಿತ್ರಾ ಮತ್ತಿತ್ತರರಿದ್ದರು..