ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ: ಕೆ.ಎಚ್. ಬಸವಂತಪ್ಪ
Watch on:
▶️ YouTube
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು
ವಿಜಯನಗರ: ಕಲ್ಯಾಣ ಕರ್ನಾಟಕದ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದ್ದು, ಈ ಭಾಗದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಬಸವಂತಪ್ಪ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
1948ರ ಸೆಪ್ಟೆಂಬರ್ 17ರಂದು ಹೈದರಾಬಾದ್ ಸಂಸ್ಥಾನವು ನಿಜಾಮರು ಹಾಗೂ ರಜಾಕರ ದಬ್ಬಾಳಿಕೆಯಿಂದ ವಿಮೋಚನೆಗೊಂಡು ಭಾರತ ಒಕ್ಕೂಟದಲ್ಲಿ ವಿಲೀನಗೊಂಡಿತು. ಭಾರತ ಸರ್ಕಾರ ಕೈಗೊಂಡ ‘ಆಪರೇಷನ್ ಪೋಲೊ’ ಸೈನಿಕ ಕಾರ್ಯಾಚರಣೆಯ ಮೂಲಕ ನಿಜಾಮರ ಆಳ್ವಿಕೆಗೆ ಅಂತ್ಯ ಹಾಡಲಾಯಿತು ಎಂದು ಅವರು ಸ್ಮರಿಸಿದರು.
ಭಾರತದ ಉಕ್ಕಿನ ಮನುಷ್ಯ, ‘ಭಾರತದ ಬಿಸ್ಮಾರ್ಕ್’ ಎಂದೇ ಕರೆಯಲ್ಪಡುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನೇತೃತ್ವದಲ್ಲಿ ನಡೆದ ಈ ಐತಿಹಾಸಿಕ ವಿಲೀನ ದೇಶದ ಏಕೀಕರಣದಲ್ಲಿ ಮಹತ್ವದ ಅಧ್ಯಾಯವಾಗಿದೆ. ಕರ್ನಾಟಕದಲ್ಲಿ ಈ ದಿನವನ್ನು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವಾಗಿ ಆಚರಿಸಲಾಗುತ್ತಿದೆ ಎಂದರು.
ವಿಮೋಚನಾ ಹೋರಾಟದಲ್ಲಿ ತ್ಯಾಗ, ಬಲಿದಾನ ಮಾಡಿದ ಹೋರಾಟಗಾರರನ್ನು ಸ್ಮರಿಸಿ, ಅವರ ಆಶಯದಂತೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಸಚಿವರು ಕರೆ ನೀಡಿದರು.