🔥 ट्रेंडिंग इटावा में एंटी करप्शन टीम का छापा: 30... આણંદમાં ભવ્ય ગણેશ વિસર્જન: હજારો ભક્તો... ભરૂચ જિલ્લા ભાજપ પ્રમુખ તરીકે પરેશ લાડ... बदरवास में शासकीय चावल की कालाबाजारी प... બહુચર માતાજીના મંદિરમાં ભવ્ય સ્વાગત: શ... मेक इन इंडिया: 12 वर्ष, 12 मापदंडों पर...
25 सित. 2026•
ગુજરાતી मराठी ਪੰਜਾਬੀ বাংলা

ಬುಲೆರೋ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವು

✍️ रिपोर्टर: MAHAMAD WALI QURESHI 🗓 25 सित. 2026, 10:30 AM 👁 24
यहाँ देखें: ▶️ YouTube 📘 Facebook
शेयर करें: 💬 WhatsApp 📘 Facebook 𝕏 Post
ಬುಲೆರೋ ವಾಹನ ಡಿಕ್ಕಿ ಹೊಡೆದು ಇಬ್ಬರು ಸಾವು

ಮೃತ ಕುಟುಂಬಗಳಿಗೆ ನ್ಯಾಯಕ್ಕಾಗಿ ಜಾಲಹಳ್ಳಿ ಅಂಬೇಡ್ಕರ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ

ಬೊಲೆರೋ ಮಾಲೀಕರ ವಿರುದ್ಧ ಪ್ರಕರಣ ದಾಖಲು ಜಲಧಾರೆ ಕಾಮಗಾರಿ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧವೂ ದೂರು ದಾಖಲಿಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹ

ನೀಡ್ 24 ನ್ಯೂಸ್

ಜಾಲಹಳ್ಳಿ ಸೆ.24- ಜಾಲಹಳ್ಳಿ ಗ್ರಾಮದ ಜಗಧಾರಾಧ್ಯ ಜಯಶಾಂತ ಲಿಂಗೇಶ್ವರ ಭವನದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಸ್ಥರು ಹಾಗೂ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಗುರುವಾರ ಜಾಲಹಳ್ಳಿಯ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಬುಧವಾರ ರಾತ್ರಿ ಬೊಲೆರೋ ವಾಹನವು ಪಾದಚಾರಿಗಳ ಮೇಲೆ ಹರಿದ ಪರಿಣಾಮ

ಹನುಮಂತ್ರಾಯ ಅವರು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಂಗಯ್ಯ ದೊಡ್ಡಮನಿ ಹೊಸೂರು ಅವರನ್ನು ತಾಲೂಕು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ರಂಗನಾಥ ನಾಯಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾಮಲಿಂಗ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ,

ಘಟನೆಗೆ ಸಂಬಂಧಿಸಿದಂತೆ ಬೊಲೆರೋ ವಾಹನದ ಮಾಲೀಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾಗಿರುವ

ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘಟನೆ ಮುಖಂಡ ನರಸಣ್ಣನಾಯಕ, ಜಲಧಾರೆ ಕಾಮಗಾರಿ ನಡೆಯುತ್ತಿದ್ದ ನಡೆಯುತ್ತಿದ್ದ ಸ್ಥಳದಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಸೂಚನಾ ನಾಮಫಲಕ, ಬ್ಯಾರಿಕೇಡ್ ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಅಪಘಾತಕ್ಕೆ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಆರೋಪಿಸಿದರು.ಮೃತ ಕುಟುಂಬಗಳಿಗೆ ನ್ಯಾಯಕ್ಕಾಗಿ ಜಾಲಹಳ್ಳಿ ಅಂಬೇಡ್ಕರ್ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ

ಕಾಮಗಾರಿ ಸ್ಥಳದಲ್ಲಿ ದೊಡ್ಡ ಪ್ರಮಾಣದ ಗುಂಡಿಗಳನ್ನು ತೆಗೆದು ಅವುಗಳನ್ನು ಸಮರ್ಪಕವಾಗಿ ಮುಚ್ಚದೇ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರಿಕೆ ವಹಿಸದೇ ಇರುವುದರಿಂದ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿ ತ್ತು. ಈ ಹಿನ್ನೆಲೆ ಕಾಮಗಾರಿ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯನ್ನು ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಜಲಧಾರೆ ಕಾಮಗಾರಿ ಸ್ಥಳದಲ್ಲಿದ್ದ ಗುಂಡಿಗೆ ಬೈಕ್ ಸವಾರರು ಬಿದ್ದ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸಲು ಮುಂದಾದ ನಾಲ್ವರು ವ್ಯಕ್ತಿಗಳಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಹೀಗಾಗಿ ಇದು ಕೇವಲ ರಸ್ತೆ ಅಪಘಾತವಲ್ಲ; ಕಾಮಗಾರಿ ಸ್ಥಳದ ಸುರಕ್ಷತಾ ಕ್ರಮಗಳ ಬಗ್ಗೆಯೂ ಗಂಭೀರವಾಗಿ ತನಿಖೆ ನಡೆಸಬೇಕಾದ ಘಟನೆ ಎಂದು ಅವರು ಒತ್ತಾಯಿಸಿದರು.

ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಹಾಗೂ ಸಂಬಂಧಪಟ್ಟವರು ಭರಿಸಬೇಕು. ಬೊಲೆರೋ ಮಾಲೀಕರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ನ್ಯಾಯಯುತವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇದೇ ವೇಳೆ ಜಾಲಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ಸಮರ್ಪಕ ಬೀದಿ ದೀಪಗಳ ಕೊರತೆಯೂ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ ಎಂದು ಮುಖಂಡರು ದೂರಿದರು. ರಾತ್ರಿ ವೇಳೆಯಲ್ಲಿ ಹೆದ್ದಾರಿ ಭಾಗ ಕತ್ತಲಿನಿಂದ ಕೂಡಿರುವುದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಅಪಾಯ ಎದುರಾಗುತ್ತಿದೆ. ಹೆದ್ದಾರಿಯಲ್ಲಿ ಹೈಮಾಸ್ಟ್ ಹಾಗೂ ಅಗತ್ಯ ಬೀದಿ ದೀಪಗಳನ್ನು ಅಳವಡಿಸಿ, ಅಪಘಾತಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಹಿಳಾ ಘಟಕದ ಕಾರ್ಯದರ್ಶಿ ಶ್ರೀದೇವಿ ರ್ಆ. ನಾಯಕ ಮಾತನಾಡಿ, ಸಾರ್ವಜನಿಕರ ಸುರಕ್ಷತೆಯನ್ನು ಕಡೆಗಣಿಸಿ ಕಾಮಗಾರಿ ನಡೆಸಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿರುವುದು ಸಾಬೀತಾದರೆ ಗುತ್ತಿಗೆದಾರರ ಪರವಾನಗಿ ರದ್ದುಪಡಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ಕಾಮಗಾರಿ ಸ್ಥಳದಲ್ಲಿ ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಸೂಚನಾ ಫಲಕ ಅಳವಡಿಸುವುದು, ಬ್ಯಾರಿಕೇಡ್ ಹಾಕುವುದು, ರಾತ್ರಿ ವೇಳೆಯಲ್ಲಿ ಎಚ್ಚರಿಕೆ ದೀಪಗಳ ವ್ಯವಸ್ಥೆ ಮಾಡುವುದು ಸೇರಿದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಾಗಿ ದೆ. ಆದರೆ ಇಲ್ಲಿ ಅಂತಹ ಕ್ರಮಗಳ ಕೊರತೆಯಿಂದ ದುರ್ಘಟನೆ ಸಂಭವಿಸಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಅಧಿಕಾರಿಗಳು ಸಮಗ್ರ ತನಿಖೆ ನಡೆಸಬೇಕು ಎಂದು ಹೇಳಿದರು.

ಮೃತ ಕುಟುಂಬಗಳು ಈಗಾಗಲೇ ತಮ್ಮ ಆಧಾರ ಕಳೆದುಕೊಂಡಿದ್ದು, ಗಾಯಗೊಂಡವರ ಕುಟುಂಬಗಳ ಮೇಲೂ ಆರ್ಥಿಕ ಹೊರೆ ಬಿದ್ದಿದೆ. ಆದ್ದರಿಂದ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಿ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ಗಾಯಾಳುಗಳಿಗೆ ಉಚಿತ ಮತ್ತು ಸಮರ್ಪಕ ಚಿಕಿತ್ಸೆ ಒದಗಿಸಬೇಕು. ಕಾಮಗಾರಿ ಸ್ಥಳಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಿ ಸುರಕ್ಷತಾ ಕ್ರಮಗಳ ಪಾಲನೆ ಖಚಿತಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಮೃತ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕಾಮಗಾರಿ ಗುತ್ತಿಗೆದಾರರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸಬೇಕು, ಮೃತರಿಗೆ ನ್ಯಾಯ ಒದಗಿಸಬೇಕು, ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟರು.

ಪ್ರತಿಭಟನೆಯಲ್ಲಿ ಚಂದಪ್ಪ ಬುದ್ದಿನ್ನಿ, ಜೆಡಿಎಸ್ ತಾಲೂಕು ಅಧ್ಯಕ್ಷ ಬಸವನಗೌಡ ದೇಸಾಯಿ, ರಂಗಣ್ಣ ಕೋರ್ಲ್ಕ, ಬಸವರಾಜ ಮಂಡಲಗುಡ್ಡ, ಶಿವಕುಮಾರ ಪಾಣಿ, ದುರುಗಪ್ಪ ರಾಂಪಳ್ಳಿ, ಭೀಮಣ್ಣ ಗುಮೇರ್ದಾ, ರಂಗನಾಥ ಮುರಾಳ, ತಿಮ್ಮಣ್ಣ ದಿವಾನ್, ರಂಗನಾಥ ಮಕಾಶಿಡ, ನಂದಪ್ಪ, ಭೀಮನಗೌಡ ಪಾಟೀಲ ಲಿಂಗದಹಳ್ಳಿ, ಅಯ್ಯಪ್ಪಸ್ವಾಮಿ ಗಣಜಿಲಿಮಠ, ಬಸವರಾಜ ಅಕ್ಕರಕಿ, ಮೌನೇಶ ಬೆಗಂಡಿ, ಚಂದ್ರು ಬೊಮ್ಮನಹಳ್ಳಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು, ಮೃತರ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
📲Get App