🔥 ट्रेंडिंग Yellow Alert Issued for 13 Karnataka D... मुख्यमंत्री योगी आदित्यनाथ ने 1000 से... उत्तराखंड: पीएमएवाई-जी के तहत 39,815 ग... राजघाट की ओर विपक्ष के मार्च से मध्य द... हरियाणा में सेवा अधिकार कानून के तहत स... हरियाणा ने ड्रग‑फ्री अभियान का विस्तार...
08 अक्टू. 2026•
ગુજરાતી मराठी ਪੰਜਾਬੀ বাংলা
*ಅತ್ತಿಗೋಡು ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಿದ ಶಾಸಕ ಕೆ ವೆಂಕಟೇಶ್.* 
 ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗೆ ಶಂಕು

*ಅತ್ತಿಗೋಡು ಗ್ರಾಮದಲ್ಲಿ ಸಿಸಿ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರೆವೇರಿಸಿದ ಶಾಸಕ ಕೆ ವೆಂಕಟೇಶ್.* ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗೆ ಶಂಕು

✍️ रिपोर्टर: Vasanthakumar C S 🗓 08 अक्टू. 2026, 06:06 PM 👁 38
शेयर करें: 💬 WhatsApp 📘 Facebook 𝕏 Post

ಜನರ ಸಮಸ್ಯೆಗಳನ್ನು ಆಲಿಸಿ ಅಧಿಕಾರಿಗಳಿಗೆ ತಾಕಿತ್ತು.*

ಪಿರಿಯಾಪಟ್ಟಣ: ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜನರ ಅಗತ್ಯಗಳಿಗೆ ತಕ್ಕಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ. ವೆಂಕಟೇಶ್ ಹೇಳಿದರು.
ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಅತ್ತಿಗೋಡು ಗ್ರಾಮದಲ್ಲಿ ಮಾತನಾಡಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳು ಮೇಲ್ಮಟ್ಟಕ್ಕೆ ಬಾರದಂತೆ ಸ್ಥಳೀಯ ಮಟ್ಟದಲ್ಲಿಯೇ ಬಗೆಹರಿಸಬೇಕು. ಈಗಾಗಲೇ ತಾಲೂಕನ್ನು ಬರಪೀಡಿತ ತಾಲೂಕು ಎಂದು ಪರಿಗಣಿಸಲಾಗಿದ್ದು, ಉದ್ಯೋಗ ಖಾತ್ರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪಿಡಿಒ ವಿಶ್ವನಾಥ್ ರವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ವಿವಿಧ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.ಎರಡು ವರ್ಷಗಳ ಹಿಂದೆ ಹೊಲಿಗೆ ಯಂತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರೂ ಇನ್ನೂ ಮಂಜೂರಾತಿ ದೊರೆತಿಲ್ಲ ಎಂದು ಕೆಲವರು ದೂರಿದರು ಕೂಡಲೇ ಫಲಾನುಭವಿಗಳಿಗೆ ಶೀಘ್ರದಲ್ಲಿ ಮಂಜೂರು ಮಾಡಿಸಿ ಕೊಡಿ ಎಂದು ಅಧಿಕಾರಿಗಳಿಗೆ ಶಾಸಕ ವೆಂಕಟೇಶ್ ತಿಳಿಸಿದರು.

ಇಒ ಪ್ರತಿಕ್ರಿಯೆ : ಇ ಸ್ವತ್ತು ಸಮಸ್ಯೆ ಕುರಿತು ಗ್ರಾಮಸ್ಥರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್, ಹಿಂದಿನ ಕಾಯ್ದೆಗಳಲ್ಲಿ ಬದಲಾವಣೆ ಆಗಿರುವ ಹಿನ್ನೆಲೆಯಲ್ಲಿ ಗ್ರಾಮಠಾಣೆ ಹಾಗೂ ಇತರೆ ದಾಖಲೆಗಳಿಗೆ ಸಂಬಂಧಿಸಿದ ಹಲವು ಪ್ರಕ್ರಿಯೆಗಳು ಗ್ರಾಮ ಪಂಚಾಯಿತಿಯಲ್ಲಿ ಪೂರ್ಣಗೊಳ್ಳುತ್ತಿಲ್ಲ. 199ನೇ ಕಾಯ್ದೆ ಜಾರಿಗೆ ಬಂದ ಬಳಿಕ ಸರ್ವೇ ಸಂಖ್ಯೆ ಹಾಗೂ ದಾಖಲೆಗಳ ಆಧಾರದ ಮೇಲೆಯೇ ಪ್ರಕ್ರಿಯೆ ನಡೆಸಬೇಕಾಗಿದೆ ಎಂದು ವಿವರಿಸಿದರು.
ಕ್ರಯಪತ್ರ, ಹಕ್ಕುಪತ್ರ ಸೇರಿದಂತೆ ಅಗತ್ಯ ದಾಖಲೆಗಳಿದ್ದಲ್ಲಿ ಇ,ಸ್ವತ್ತು ಪ್ರಕ್ರಿಯೆಗೆ ಅವಕಾಶವಿದ್ದು, ಹೊಸ ಕಾನೂನುಗಳ ಅನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಅವಧಿಯಲ್ಲಿ ಅರಣ್ಯ ಹಕ್ಕು ಮತ್ತು ಭೂ ದಾಖಲೆಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿದ್ದು, 1 ಸಾವಿರ ಚ.ಮೀ.ವರೆಗೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ವೀರಶೈವ ಸಮುದಾಯ ಭವನ ಕಾಮಗಾರಿ ಸ್ಥಗಿತ:
ಈ ವೇಳೆ ಗ್ರಾಮಸ್ಥರು,ವೀರಶೈವ ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರಾಗಿದ್ದ 20 ಲಕ್ಷ ಅನುದಾನದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅಧಿಕಾರಿಗಳು ಗಮನ ಹರಿಸುತ್ತಿಲ್ಲ ಎಂದು ಶಾಸಕರ ಗಮನಕ್ಕೆ ತಂದರು.
ಭವನ ನಿರ್ಮಾಣ ವಿಳಂಬ :ಇದಕ್ಕೆ ಪ್ರತಿಕ್ರಿಯಿಸಿದ ಕೆಆರ್‌ಡಿಎಲ್ ಅಭಿಯಂತರ ಸುಗಂಧರಾಜ, ಒಟ್ಟು 20 ಲಕ್ಷ ರೂ ಅನುದಾನದಲ್ಲಿ 10 ಲಕ್ಷ ರೂ ಮಾತ್ರ ಬಿಡುಗಡೆಯಾಗಿದ್ದು, ಉಳಿದ 10 ಲಕ್ಷ ರೂ ತಾಂತ್ರಿಕ ಕಾರಣಗಳಿಂದ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ ಎಂದು ತಿಳಿಸಿದರು.ಈ ವಿವರಣೆಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಕೆ.ವೆಂಕಟೇಶ್,ಕಾಮಗಾರಿ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಗುತ್ತಿಗೆ ಯಾಕೆ ತೆಗೆದುಕೊಂಡಿರಿ? ಕೂಡಲೇ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಿ. ನಿಮ್ಮಿಂದ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ ಗ್ರಾಮಸ್ಥರೇ ಕಾಮಗಾರಿ ಪೂರ್ಣಗೊಳಿಸಲಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.ಹಾಗೆಯೇ, ಸಮುದಾಯ ಭವನ ಕಾಮಗಾರಿಯನ್ನು ಗ್ರಾಮಸ್ಥರೇ ಪೂರ್ಣಗೊಳಿಸಿಕೊಳ್ಳುವಂತೆ ಸೂಚಿಸಿದ ಅವರು, ಇಲಾಖೆಯಿಂದ ಬರಬೇಕಾದ ಅನುದಾನವನ್ನು ನಿಯಮಾನುಸಾರ ಪಾವತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರಿಗೆ ಸಮಸ್ಯೆ ಬಗೆ ಹರಿಸಿ : ಗ್ರಾಮಸ್ಥರು ಕಳೆದ ಆರು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು,ಈಗಿರುವ ಕೊಳವೆ ಬಾವಿಯಿಂದ ಸಾಕಷ್ಟು ನೀರು ಬಾರದೆ ತೀವ್ರ ಸಮಸ್ಯೆಯಾಗಿದೆ ಜತೆಗೆ ಕೆರೆಯ ಏರಿ ಕಿರಿದಾಗಿದ್ದು,ವಾಹನ ಸಂಚಾರದಿಂದ ಪೈಪ್‌ಲೈನ್ ಹಾನಿಗೊಳಗಾದ ಪರಿಣಾಮ ನೀರು ಸರಬರಾಜು ಅಸ್ತವ್ಯಸ್ತಗೊಂಡಿದೆ ಎಂದು ದೂರಿದರು.ಅಲ್ಲದೆ ಗ್ರಾಮದ ಕಾಂತರಾಜು ಅವರ ಮನೆಯಿಂದ ರಮೇಶ್ ಅವರ ಮನೆಯವರೆಗೆ ಹೊಸ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಬೇಕು ಎಂದು ಮನವಿ ಸಲ್ಲಿಸಿದರು.
ಅಗತ್ಯ ಕ್ರಮಕ್ಕೆ ಭರವಸೆ:ಗ್ರಾಮಸ್ಥರ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಕುಡಿಯುವ ನೀರಿಗೆ ಸಮಸ್ಯೆ ಬಾರದಂತೆ ಎಚ್ಚರಿಕೆ ವಹಿಸಲು ಪಂಚಾಯಿತಿ ಅಧಿಕಾರಿಗೆ ತಿಳಿಸಿದಲ್ಲದೆ ಎಲ್ಲಾ ಸಮಸ್ಯೆಗಳಿಗೂ ಕೂಡಲೇ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಕೆ. ವೆಂಕಟೇಶ್ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ನಿಸರ್ಗಪ್ರಿಯಾ, ತಾಲೂಕು ಸ. ನೌ. ಸಂಘದ ಅಧ್ಯಕ್ಷ ಹೊಸಳ್ಳಿ ಕೃಷ್ಣೇಗೌಡ, ಮೈಮುಲ್ ನಿರ್ದೇಶಕ ಪ್ರಕಾಶ್ ಬಿ.ಎ., ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಟಿ.ಸ್ವಾಮಿ,ಎಂಡಿಸಿಸಿ ನಿರ್ದೇಶಕ ಇ.ಪಿ. ಲೋಕೇಶ್, ಸಾಲುಗೊಪ್ಪಲು ಪುಟ್ಟರಾಜು, ಪಿಡಿಒ ವಿಶ್ವನಾಥ್, ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳಾದ ಪದ್ಮಶ್ರೀ, ಸೋಮಯ್ಯ, ಚಂದ್ರೇಗೌಡ, ಮಲ್ಲಿಕಾರ್ಜುನ್, ಲವ, ಪ್ರಸಾದ್, ವೀಣಾ ಸೇರಿದಂತೆ ಗ್ರಾಮ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.
📲Get App