🔥 TRENDING Rajesh kumar paswan अररिया: सोनामनी गोदाम थाना पुलिस की बड... Rahul Gandhi to Address 'Hisab Maango'... New Mahendra Mohan Choudhury Hospital... Tamulpur officials push for more regis... Bengal's First Tiger Relocation: Tigre...
26 Oct 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿ ಸರ್ಕಾರಿ ಶಾಲಾ ಮೈದಾನದಲ್ಲಿ ಖಾಸಗಿ ಕ್ರಿಕೆಟ್ ಟೂರ್ನಿ: ಶಿಕ್ಷಣಾಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

✍️ Reporter: Khaja Hussain 🗓 26 Oct 2026, 04:38 PM 👁 81
Share: 💬 WhatsApp 📘 Facebook 𝕏 Post
**ಜಾಲಹಳ್ಳಿ | ಬ್ರೇಕಿಂಗ್ ನ್ಯೂಸ್**

# ಜಾಲಹಳ್ಳಿ ಸರ್ಕಾರಿ ಶಾಲಾ ಮೈದಾನದಲ್ಲಿ ಖಾಸಗಿ ಕ್ರಿಕೆಟ್ ಟೂರ್ನಿ: ಶಿಕ್ಷಣಾಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ

### ಶಾಲಾ ಮೈದಾನವನ್ನು ಖಾಸಗಿ ಪಂದ್ಯಾವಳಿಗೆ ನೀಡಿದ ಮುಖ್ಯೋಪಾಧ್ಯಾಯರ ವಿರುದ್ಧ ಕ್ರಮಕ್ಕೆ ಉದಯಕುಮಾರ್ ಆಗ್ರಹ

**ಜಾಲಹಳ್ಳಿ, ಅ.26:** ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕನ್ಯಾ ಪ್ರೌಢಶಾಲೆಯ ಮೈದಾನದಲ್ಲಿ ಖಾಸಗಿ ಕ್ರಿಕೆಟ್ ಟೂರ್ನಮೆಂಟ್ ನಡೆಸಲು ಅವಕಾಶ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ಈ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಮುಖ್ಯೋಪಾಧ್ಯಾಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉದಯಕುಮಾರ್ ಒತ್ತಾಯಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯ ಆಸ್ತಿಯನ್ನು ಸಂರಕ್ಷಿಸಬೇಕಾದ ಮುಖ್ಯೋಪಾಧ್ಯಾಯರೇ ನಿಯಮಗಳನ್ನು ಉಲ್ಲಂಘಿಸಿ, ಖಾಸಗಿ ವ್ಯಕ್ತಿಗಳೊಂದಿಗೆ ಶಾಮೀಲಾಗಿ ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಆರೋಪಿಸಿದರು.

ಈ ಕುರಿತು 2026ರ ಅಕ್ಟೋಬರ್ 9ರಂದು ರಾಯಚೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ (DDPI) ದೂರು ಸಲ್ಲಿಸಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಶಾಲಾ ಮೈದಾನದಲ್ಲಿ ಅನಧಿಕೃತ ಚಟುವಟಿಕೆಗಳಿಗೆ ಅವಕಾಶ ನೀಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ವಾತಾವರಣ ಹಾಗೂ ಸುರಕ್ಷತೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ವಿಚಾರವಾಗಿ ಸಂಬಂಧಿಸಿದ ಶಿಕ್ಷಣಾಧಿಕಾರಿಗಳನ್ನು ಭೇಟಿ ಮಾಡಿ, ಶಾಲಾ ಆವರಣದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ಮಾಹಿತಿ ನೀಡಲಾಗಿದೆ. ಶಾಲೆಯ ಆಸ್ತಿಯನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ಅಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯರು ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಕ್ಸ್ ನಲ್ಲಿ

**ಹಿಂದೆ ಟೂರ್ನಮೆಂಟ್ ನಡೆಸಿದ್ದರೂ ಈ ಬಾರಿ ವಿರೋಧ**

ಈ ಹಿಂದೆ ಉದಯಕುಮಾರ್ ಅವರೇ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಿದ್ದರು ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, “ಹಿಂದೆ ನಾನು ಕ್ರಿಕೆಟ್ ಟೂರ್ನಮೆಂಟ್ ನಡೆಸಿದ್ದು ನಿಜ. ಆದರೆ, ಶಾಲೆಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದರಿಂದ ಈ ಬಾರಿ ಪಂದ್ಯಾವಳಿ ನಡೆಸಬಾರದು ಎಂದು ಹೇಳಿದ್ದೇನೆ. ಇಂತಹ ಪರಿಸ್ಥಿತಿಯಲ್ಲೂ ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವುದು ಖಂಡನೀಯ” ಎಂದು ತಿಳಿಸಿದರು.

ಶಾಲಾ ಮೈದಾನದಲ್ಲಿ ಅನಧಿಕೃತವಾಗಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅವಕಾಶ ನೀಡಿದ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿ, ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಗೋವಿಂದ, ಶರಣಬಸವ ಕಾವಲಿ, ಶಿವರಾಜ ಬಾವಿಮನಿ, ವೆಂಕಟೇಶ ದೊರೆ, ರಂಗಪ್ಪ, ಶಿವು ಬಂಡಿ, ತಿಮ್ಮಣ್ಣ, ಸಾಬಣ್ಣ, ಕೃಷ್ಣಪ್ಪ, ರವಿ, ನಿಂಗಪ್ಪ ಹಾಗೂ ವೆಂಕೋಬ ಉಪಸ್ಥಿತರಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App