🔥 TRENDING वाराणसी के समाजसेवी अमरीश सिंह भोला को... CJP Leaders Questioned 4 Hours by Delh... Trump Warns Iran: 'You'll Know Soon En... Chennai's 'Transparent' Phase Ends as... NMC Proposes NEET-PG Reforms: Rank-Bas... CM dares Gehlot: More cases with proof...
06 Nov 2026•
ગુજરાતી मराठी ਪੰਜਾਬੀ বাংলা

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್‌ಗೆ ಗೆಲುವು

✍️ Reporter: Viswanatha D R 🗓 28 Oct 2026, 07:37 AM 👁 78
Watch on: 📘 Facebook
Share: 💬 WhatsApp 📘 Facebook 𝕏 Post
ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಒಲಿದ ಜಯ; ಕಾಂಗ್ರೆಸ್ ಅಭ್ಯರ್ಥಿಗೆ ಹಿನ್ನಡೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಬೆಂಬಲಿತ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಅವರ ವಿರುದ್ಧ ಜಯಗಳಿಸುವ ಮೂಲಕ ವಿಧಾನ ಪರಿಷತ್ತಿಗೆ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 23ರಂದು ನಡೆದ ಚುನಾವಣೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಶೇ.73.58ರಷ್ಟು ಮತದಾನ ದಾಖಲಾಗಿತ್ತು. ಅಕ್ಟೋಬರ್ 27ರಂದು ಆರಂಭಗೊಂಡ ಮತ ಎಣಿಕೆಯಲ್ಲಿ ಮೊದಲ ಸುತ್ತಿನಿಂದಲೇ ಮುನ್ನಡೆ ಸಾಧಿಸಿದ್ದ ಸುರೇಶ್ ಅವರು ಅಂತಿಮವಾಗಿ ಗೆಲುವು ಪಡೆದಿದ್ದಾರೆ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ನಡುವೆ ಪ್ರಮುಖ ಪೈಪೋಟಿ ಏರ್ಪಟ್ಟಿತ್ತು. ಎರಡೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದ ಚುನಾವಣೆಯಲ್ಲಿ ಸುರೇಶ್ ಅವರ ಗೆಲುವಿನೊಂದಿಗೆ ಆಗ್ನೇಯ ಪದವೀಧರ ಕ್ಷೇತ್ರ ಬಿಜೆಪಿ ವಶದಲ್ಲಿ ಉಳಿದಂತಾಗಿದೆ.
📲Get App