🔥 TRENDING Bhopal Power Cut on Oct 30: 2‑6‑Hour O... परीक्षा और बारिश के कारण रायबरेली-कानप... Kya prayagraj khatre me hai राजू भाई को मिली बेटी की सौगात વેજલપુર (અમદાવાદ)ના જલીયાણા સત્સંગ મંડ... राहुल गांधी और महेश भाईया एक साथ आए
30 Oct 2026•
ગુજરાતી मराठी ਪੰਜਾਬੀ বাংলা

ಜಿಲ್ಲಾ ಯುವಜನೋತ್ಸವ: ಗಿರಿಯಮ್ಮ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

✍️ Reporter: Viswanatha D R 🗓 30 Oct 2026, 11:53 AM 👁 21
Watch on: 📘 Facebook
Share: 💬 WhatsApp 📘 Facebook 𝕏 Post

ಜಿಲ್ಲಾ ಯುವಜನೋತ್ಸವ: ಗಿರಿಯಮ್ಮ ಕಾಲೇಜಿನ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಹರಿಹರ: ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಆರ್. ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂರು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗಿದ್ದಾರೆ.

ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ದಾವಣಗೆರೆ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿನಿಯರು ಕಿರುನಾಟಕ, ಜಾನಪದ ನೃತ್ಯ ಹಾಗೂ ಜಾನಪದ ಗೀತೆ ಸ್ಪರ್ಧೆಗಳಲ್ಲಿ ಭಾಗವಹಿಸಿ, ಮೂರೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಮತ್ತು ನಗದು ಬಹುಮಾನ ಪಡೆದಿದ್ದಾರೆ.

ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
📲Get App