🔥 TRENDING Mother and 16-Year-Old Son Found Dead... Auto-installed app drains ₹84,000 from... Elderly Thane Resident Defrauded of Rs... Bihar Cabinet Approves Industrializati... New Low Pressure Area in Bay of Bengal... ਮਾਡਲ ਟਾਊਨ ਫੇਜ਼-4 ਅਤੇ ਟੀਚਰ ਕਾਲੋਨੀ ਵਿੱਚ...
31 Oct 2026•
ગુજરાતી मराठी ਪੰਜਾਬੀ বাংলা
Agriculture

ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹ

✍️ Reporter: Basavaraj pujari 🗓 31 Oct 2026, 05:09 PM 👁 11
Share: 💬 WhatsApp 📘 Facebook 𝕏 Post

ಕರ್ನಾಟಕ ಬಂದ್‌ಗೆ ರೈತ ಸಂಘದ ಬೆಂಬಲ; ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ಬೀದರ್: ರಾಜ್ಯದ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ

ಕಬ್ಬಿಗೆ ಸೂಕ್ತ ಬೆಲೆ ನಿಗದಿಗೆ ಆಗ್ರಹ

ಕರ್ನಾಟಕ ಬಂದ್‌ಗೆ ರೈತ ಸಂಘದ ಬೆಂಬಲ; ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

ಬೀದರ್: ರಾಜ್ಯದ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರಕಿಸಿಕೊಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಚುನ್ನಪ್ಪ ಪೂಜಾರಿ ಅವರು ಅ. 31ರಂದು ಕರೆ ನೀಡಿರುವ ಸಂಪೂರ್ಣ ಕರ್ನಾಟಕ ಬಂದ್‌ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಬೀದರ್ ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಸಂಘವು ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಕೃಷಿ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಕಬ್ಬಿನ ಬೆಳೆಯಿಂದ ನ್ಯಾಯಯುತ ಆದಾಯ ದೊರೆಯುವಂತೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ರೈತರ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಬೀದಿಗಿಳಿದು ತೀವ್ರ ಹೋರಾಟ ನಡೆಸಲಾಗುವುದು ಎಂದು ಸಂಘದ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿ, ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ, ಹಸಿರು ಸೇನೆ ಅಧ್ಯಕ್ಷ ನೀಲಕಂಠ ಬುಯ್ಯಾ, ಜಿಲ್ಲಾ ಉಪಾಧ್ಯಕ್ಷ ಶಂಕರಪ್ಪ ಪಾರಾ, ರಾಜ್ಯ ಮಹಿಳಾ ಕಾರ್ಯದರ್ಶಿ ಶೋಭಾವತಿ ಕಾರಭಾರಿ, ರೈತ ಮುಖಂಡರಾದ ಸಂತೋಷ ವಲ್ಲಪೆ, ಸುಮಂತ ಗ್ರಾಮಲೆ, ವೀರಶೆಟ್ಟಿ ಬಿರಾದಾರ, ಬಸಪ್ಪ ಮಳಗೆ, ಬಾಬು ಮಳಗೆ, ವೆಂಕಟರಾವ ವಲ್ಲಪೆ ಹಾಗೂ ಬಂಡೆಪ್ಪ ಕಮಠಾಣೆ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ.
📲Get App