🔥 TRENDING Police and Public Participate in Padam... 108 Students Caught Drinking Alcohol a... Cyclone Arnab Hits Northern Andhra Pra... Odisha Issues Flood Alert as Heavy Rai... चक्रवर्ती तूफ़ान अरनव के अशर से हरदोई... Coastal Alert Issued for Odisha and An...
31 Oct 2026•
ગુજરાતી मराठी ਪੰਜਾਬੀ বাংলা
National

ಬಿಮ್ಸ್ನಲ್ಲಿ ವೇತನ ಹೆಚ್ಚಳದ ಅಕ್ರಮ ಆರೋಪ: ಸಮಗ್ರ ತನಿಖೆಗೆ ಆಗ್ರಹ

✍️ Reporter: Basavaraj pujari 🗓 31 Oct 2026, 01:36 PM 👁 19
Share: 💬 WhatsApp 📘 Facebook 𝕏 Post

ಜಿಲ್ಲಾಧಿಕಾರಿಗಳ ಸೂಚನೆಗೂ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ ಬೀದರ್: ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಪಲ್ಲವಿ ಪತ್ತೆಪೂರ್‌ಕರ್ ಅವರು ನಿಯಮಬಾಹಿರವಾ

ಬಿಮ್ಸ್ನಲ್ಲಿ ವೇತನ ಹೆಚ್ಚಳದ ಅಕ್ರಮ ಆರೋಪ: ಸಮಗ್ರ ತನಿಖೆಗೆ ಆಗ್ರಹ
ಜಿಲ್ಲಾಧಿಕಾರಿಗಳ ಸೂಚನೆಗೂ ಕ್ರಮ ಕೈಗೊಳ್ಳದಿದ್ದರೆ ಹೋರಾಟದ ಎಚ್ಚರಿಕೆ

ಬೀದರ್: ನಗರದ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ನಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಪಲ್ಲವಿ ಪತ್ತೆಪೂರ್‌ಕರ್ ಅವರು ನಿಯಮಬಾಹಿರವಾಗಿ ವೇತನ ಹೆಚ್ಚಳಗಳನ್ನು ಪಡೆದಿದ್ದಾರೆ ಎಂಬ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಮಾದಿಗ ಚೆನ್ನಯ್ಯ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ರಮೇಶ್ ಕಟ್ಟಿತೂಗಾವ್ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಜೂನ್ 15ರಂದು ಬೀದರ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಮನವಿಯಲ್ಲಿ ಉಲ್ಲೇಖಿಸಿರುವಂತೆ, ಡಾ. ಪಲ್ಲವಿ ಪತ್ತೆಪೂರ್‌ಕರ್ ಅವರು 2007ರ ಡಿಸೆಂಬರ್‌ನಲ್ಲಿ ಬಿಮ್ಸ್ ಸಂಸ್ಥೆಗೆ ಸೇವೆಗೆ ಸೇರಿದಾಗಿನಿಂದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಲ್ಲ ಹಾಗೂ ಅವರ ಪರೀಕ್ಷಾರ್ಥ ಸೇವಾವಧಿಯೂ ಪೂರ್ಣಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಆದಾಗ್ಯೂ, ಸೇವೆಗೆ ಸೇರಿದ ದಿನಾಂಕದಿAದಲೇ ನಿಯಮಿತ ವೇತನ ಹೆಚ್ಚಳಗಳನ್ನು ಪಡೆದಿದ್ದಾರೆಂದು ಅವರು ಆರೋಪಿಸಿದ್ದಾರೆ.

ಸರ್ಕಾರದ ಸೇವಾ ನಿಯಮಗಳ ಪ್ರಕಾರ ವೇತನ ಹೆಚ್ಚಳಕ್ಕೆ ಅಗತ್ಯವಿರುವ ಅರ್ಹತೆಗಳು ಮತ್ತು ಷರತ್ತುಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಸಂಬAಧಪಟ್ಟ ಅಧಿಕಾರಿಗಳು ಪರಿಶೀಲಿಸಬೇಕು. ನಿಯಮಗಳ ಉಲ್ಲಂಘನೆ ನಡೆದಿರುವುದು ತನಿಖೆಯಿಂದ ದೃಢಪಟ್ಟರೆ, ಸಂಬAಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ರಮೇಶ್ ಕಟ್ಟಿ ತೂಗಾವ್ ಅವರು ಒತ್ತಾಯಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬAಧಿಸಿದAತೆ ಬೀದರ್ ಜಿಲ್ಲಾಧಿಕಾರಿಗಳು 2026ರ ಜುಲೈ 17ರಂದು ಬಿಮ್ಸ್ ನಿರ್ದೇಶಕರಿಗೆ ಪತ್ರ ಬರೆದು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆದರೆ, ತಮ್ಮ ಗಮನಕ್ಕೆ ಬಂದಿರುವ ಮಾಹಿತಿಯ ಪ್ರಕಾರ, ಈವರೆಗೆ ಸಂಬAಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆಯ ಹೊರತಾಗಿಯೂ ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳದಿದ್ದರೆ ಸಮಿತಿಯ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ರಮೇಶ್ ಕಟ್ಟಿತೂಗಾವ್ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📲Get App