🔥 TRENDING CAIT के राष्ट्रीय अध्यक्ष बृजमोहन अग्र... उज्जैन में कृषि क्विज प्रतियोगिता के व... भारत आदिवासी पार्टी के सांसद राज कुमार... भिण्ड में डेयरी से जप्त किया गया 1 क्व... ब्रिक्स सस्टेनेबल लाइफस्टाइल वीक' के त... मध्यप्रदेश स्थापना दिवस पर प्रभारी मंत...
01 Nov 2026•
ગુજરાતી मराठी ਪੰਜਾਬੀ বাংলা

ಸರ್ಕಾರಿ ಶಾಲಾ ಮಕ್ಕಳ ಸಾಧನೆಗೆ ಸ್ನೇಹಿತರ ಬಳಗದ ಪ್ರೋತ್ಸಾಹ – ಡಾ. ಬಿ. ಅಬ್ದುಲ್ ರೆಹಮಾನ್ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಸನ್ಮಾನ

✍️ Reporter: ಮಂಜುನಾಥ ಹೂಡೇಂ 🗓 01 Nov 2026, 04:35 PM 👁 20
Share: 💬 WhatsApp 📘 Facebook 𝕏 Post

ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಸನ್ಮಾನ

ಕೂಡ್ಲಿಗಿ: ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಗೆ ಪ್ರೋತ್ಸಾಹ ನೀಡುವುದು ಸಮಾಜದ ಜವಾಬ್ದಾರಿಯಾಗಿದೆ ಎಂಬ ಆಶಯದೊಂದಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸ್ನೇಹಿತರ ಬಳಗದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಗೌರವಿಸಿ ಸನ್ಮಾನಿಸಲಾಯಿತು.
ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಮೆನ್ ಬಾಯ್ಸ್ ಸ್ಕೂಲ್) ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿನಿ ಪುಷ್ಪಲತಾ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದರೆ, ಏಳನೇ ತರಗತಿಯ ವಿದ್ಯಾರ್ಥಿನಿ ವೀಣಾ ಮರಬನಹಳ್ಳಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಇಬ್ಬರು ವಿದ್ಯಾರ್ಥಿನಿಯರ ಪ್ರತಿಭೆ ಹಾಗೂ ಸಾಧನೆಯನ್ನು ಗುರುತಿಸಿದ ಸ್ನೇಹಿತರ ಬಳಗದ ಅಧ್ಯಕ್ಷರು, ಸಮಾಜಸೇವಕರಾದ ಡಾ. ಬಿ. ಅಬ್ದುಲ್ ರೆಹಮಾನ್ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಬಿ. ಅಬ್ದುಲ್ ರೆಹಮಾನ್, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪ್ರತಿಯೊಬ್ಬರ ಕರ್ತವ್ಯ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಸೂಕ್ತ ಪ್ರೋತ್ಸಾಹ ಮತ್ತು ಬೆಂಬಲ ದೊರೆತರೆ ಮಕ್ಕಳು ಭವಿಷ್ಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯ. ಸರ್ಕಾರಿ ಶಾಲೆಗಳ ಪ್ರತಿಭಾವಂತ ಮಕ್ಕಳ ಬೆನ್ನಿಗೆ ನಿಂತು ಪ್ರೋತ್ಸಾಹಿಸುವ ಕಾರ್ಯವನ್ನು ಸ್ನೇಹಿತರ ಬಳಗ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಗುರುಮಾತೆಯರು, ವಿದ್ಯಾರ್ಥಿಗಳು, ಪೋಷಕರು, ಸ್ನೇಹಿತರ ಬಳಗದ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದು, ವಿದ್ಯಾರ್ಥಿನಿಯರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ನಾಡು-ನುಡಿಯ ಹಬ್ಬದ ಸಂಭ್ರಮದೊಂದಿಗೆ ಪ್ರತಿಭೆಗೆ ಪ್ರೋತ್ಸಾಹ, ಸಾಧಕರಿಗೆ ಗೌರವ ನೀಡುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಪ್ರೇರಣೆ ನೀಡಿದ ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿಬಂದಿತು.
📲Get App