🔥 TRENDING इलाहाबाद प्रकरण को लेकर बेगसराय सिविल... रायबरेली में 17 वर्षीय किशोर का शव नाल... Luthra Brothers to Pay ₹20 Lakh Each t... Goa to File Supreme Court Petition Aga... Goa to Approach Supreme Court Over Sch... Amur Falcons Arrive in Nagaland on The...
03 Nov 2026•
ગુજરાતી मराठी ਪੰਜਾਬੀ বাংলা

ಭ್ರಷ್ಟಾಚಾರ ವಿರುದ್ಧ ಜಾಗೃತಿ: ವಿದ್ಯಾರ್ಥಿಗಳು ಅವಕಾಶಗಳ ಸದ್ಬಳಕೆ ಮಾಡಿಕೊಳ್ಳಿ – ಸರಳಾ ಪಿ.

✍️ Reporter: Viswanatha D R 🗓 03 Nov 2026, 01:20 PM 👁 43
Watch on: 📘 Facebook
Share: 💬 WhatsApp 📘 Facebook 𝕏 Post
ಹರಿಹರ: ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳುವುದರ ಜೊತೆಗೆ ಮೊಬೈಲ್ ಬಳಕೆಗೆ ಮಿತಿ ಹಾಕಿಕೊಂಡು ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಆದ್ಯತೆ ನೀಡಬೇಕು. ವಿಶೇಷವಾಗಿ ಹೆಣ್ಣುಮಕ್ಕಳು ತಮಗೆ ದೊರೆಯುವ ಶೈಕ್ಷಣಿಕ ಮತ್ತು ಜೀವನದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಧೈರ್ಯದಿಂದ ಮುನ್ನಡೆಯಬೇಕು ಎಂದು ದಾವಣಗೆರೆ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಸರಳಾ ಪಿ. ಕರೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ ಹಾಗೂ ದಾವಣಗೆರೆ ಲೋಕಾಯುಕ್ತ ಪೊಲೀಸ್ ವಿಭಾಗದ ಸಹಯೋಗದಲ್ಲಿ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನಗತ್ಯವಾಗಿ ಮೊಬೈಲ್‌ನಲ್ಲಿ ಸಮಯ ವ್ಯರ್ಥ ಮಾಡದೆ ಶೈಕ್ಷಣಿಕ ಸಾಧನೆಗೆ ಹೆಚ್ಚಿನ ಗಮನ ನೀಡಬೇಕು. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಜಾಗೃತ ನಾಗರಿಕರಾಗಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದು ತಿಳಿಸಿದರು.

ದಾವಣಗೆರೆ ಲೋಕಾಯುಕ್ತ ಪೊಲೀಸ್ ವಿಭಾಗದ ಸಿಬ್ಬಂದಿಗಳಾದ ಗಿರೀಶ್ ಮತ್ತು ಕೋಟಿನಾಯ್ಕ್ ಉಪಸ್ಥಿತರಿದ್ದು ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಶಕುಂತಲಾ ಎನ್. ವಹಿಸಿದ್ದರು. ಡಾ. ಗೌರಮ್ಮ ಎಂ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವನಾಥ ಡಿ.ಆರ್. ಸ್ವಾಗತಿಸಿದರು. ವಿದ್ಯಾರ್ಥಿ ಹರೀಶ್ ಪ್ರಾರ್ಥಿಸಿದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಮಮತಾ ಸಾಹುಕಾರ್ ವಂದನಾರ್ಪಣೆ ಸಲ್ಲಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಭ್ರಷ್ಟಾಚಾರ ವಿರೋಧಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪ್ರತಿಜ್ಞೆ ಸ್ವೀಕರಿಸಿದರು.
📲Get App