🔥 TRENDING Lakshman Sunil Lahri Criticizes Music... India Clinches 5‑Wicket Victory Over N... Tanvi becomes first Indian woman to re... Rohit Sharma's Lightning-Fast Throw Di... Jailer 2’s Day‑22 Box‑Office Figures R... আকাশে নয়, মাঠের মাঝে বসে চিল! মুর্শিদ...
05 Nov 2026•
ગુજરાતી मराठी ਪੰਜਾਬੀ বাংলা

ಗಾಣದಾಳ್ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ರಸ್ತೆಯ ಮೇಲೆ ಹರಿಯುತ್ತಿರುವ ಚರಂಡಿ ನೀರು: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ ### ತಿಂಗಳುಗಳು ಕಳೆದರೂ ಸಮಸ್ಯೆಗೆ ಮುಕ್ತಿ ಇಲ್ಲ; ಡೆಂಗ್ಯೂ, ಮಲೇರಿಯಾ ಹರಡುವ ಭೀತಿ – ಕೂಡಲೇ ಚರಂಡಿ ದುರಸ್ತಿಗೆ ವಾರ್ಡ್‌ ನಿವಾಸಿಗಳ ಆಗ್ರಹ

✍️ Reporter: Khaja Hussain 🗓 05 Nov 2026, 09:05 AM 👁 24
Share: 💬 WhatsApp 📘 Facebook 𝕏 Post
ದೇವದುರ್ಗ | ಬ್ರೇಕಿಂಗ್ ನ್ಯೂಸ್

### ಗಾಣದಾಳ್ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ರಸ್ತೆಯ ಮೇಲೆ ಹರಿಯುತ್ತಿರುವ ಚರಂಡಿ ನೀರು: ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ

### ತಿಂಗಳುಗಳು ಕಳೆದರೂ ಸಮಸ್ಯೆಗೆ ಮುಕ್ತಿ ಇಲ್ಲ; ಡೆಂಗ್ಯೂ, ಮಲೇರಿಯಾ ಹರಡುವ ಭೀತಿ – ಕೂಡಲೇ ಚರಂಡಿ ದುರಸ್ತಿಗೆ ವಾರ್ಡ್‌ ನಿವಾಸಿಗಳ ಆಗ್ರಹ

ಗಾಣದಾಳ್, ನ. 4: ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಗಾಣದಾಳ್ ಗ್ರಾಮದ ವಾರ್ಡ್‌ ನಂ. 1ರ ಎಸ್‌ಸಿ ಕಾಲೋನಿಯಲ್ಲಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿರುವ ಸಮಸ್ಯೆಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದು ಹಲವು ತಿಂಗಳುಗಳು ಕಳೆದಿದ್ದರೂ, ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪರಿಣಾಮವಾಗಿ ರಸ್ತೆಯ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ದುರ್ವಾಸನೆ ಹಾಗೂ ಅನೈರ್ಮಲ್ಯದಿಂದ ನಿವಾಸಿಗಳು ಬೇಸತ್ತಿದ್ದಾರೆ.

ಕೊಳಚೆ ನೀರು ರಸ್ತೆಯ ಮೇಲೆ ನಿಂತು ಹರಿಯುತ್ತಿರುವುದರಿಂದ ಸೊಳ್ಳೆಗಳ ಉತ್ಪತ್ತಿಯಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಹೆಚ್ಚಿದೆ. ಇದರಿಂದ ಮಕ್ಕಳು, ವೃದ್ಧರು ಸೇರಿದಂತೆ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಆತಂಕ ಎದುರಾಗಿದೆ.

ಈ ಕುರಿತು ಮಾತನಾಡಿದ ವಾರ್ಡ್‌ನ ಯಾಕೂಬ್ ದೊಡ್ಡಮನಿ ಹಾಗೂ ಸ್ಥಳೀಯ ನಾಗರಿಕರು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಚರಂಡಿ ಕಾಮಗಾರಿಯನ್ನು ದುರಸ್ತಿಗೊಳಿಸಬೇಕು. ಕೊಳಚೆ ನೀರು ರಸ್ತೆಯ ಮೇಲೆ ಹರಿಯದಂತೆ ಶಾಶ್ವತ ಪರಿಹಾರ ಕಲ್ಪಿಸುವುದರ ಜೊತೆಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಅಧಿಕಾರಿಗಳು ಶೀಘ್ರದಲ್ಲೇ ಸಮಸ್ಯೆ ಬಗೆಹರಿಸದಿದ್ದರೆ ಗ್ರಾಮಸ್ಥರೊಂದಿಗೆ ಸೇರಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
📲Get App