🔥 TRENDING हाता कसया चौराहे पर पुल निर्माण कार्य... करौली के बाजार में महंगाई के बावजूद धन... લીલીયા નજીક હાથીગઢ-બોડીયા રોડ પર નમકીન... সিলচরে 'রাষ্ট্রাগান' শব্দের ব্যবহার নি... সিলচরে 'রাষ্ট্রাগান' শব্দের ব্যবহার নি... दो बाइकों की आमने-सामने भिड़ंत में दो...
06 Nov 2026•
ગુજરાતી मराठी ਪੰਜਾਬੀ বাংলা

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಆಗ್ರಹ - ಸಿಐಟಿಯು ಸಂಯೋಜಿತ ಅಂಗನವಾಡಿ ನೌಕರರ ಸಂಘದ ಸಮ್ಮೇಳನ -ವಿವಿಧ ಬೇಡಿಕೆ ಈಡೇರದಿದ್ದರೆ ಹೋರಾಟಕ್ಕೆ ತೀರ್ಮಾನ

✍️ Reporter: Ningappa 🗓 06 Nov 2026, 03:44 PM 👁 10
Share: 💬 WhatsApp 📘 Facebook 𝕏 Post
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಸಮ್ಮೇಳನ

ರಾಯಚೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ಸಂಘಟನೆ ಬಲಪಡಿಸುವ ಕುರಿತು ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಸಮ್ಮೇಳನ ಜರುಗಿತು.

ರಾಜ್ಯ ಮುಖಂಡರಾದ ಸುನಂಧ ಅವರು ಸಮ್ಮೇಳ ಉದ್ಘಾಟಿಸಿ ಮಾತನಾಡಿದರು, ಅಂಗನವಾಡಿ ಕೇಂದ್ರಗಳ ಸಮಸ್ಯೆಗಳು, ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಸರ್ಕಾರಿ ನೌಕರರ ಸ್ಥಾನಮಾನ ನೀಡುವುದು, ಕನಿಷ್ಠ ವೇತನ ಹೆಚ್ಚಳ ಮಾಡುವುದು, ಪಿಂಚಣಿ, ಗ್ರಾಚ್ಯುಟಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವುದು, ಕೆಲಸದ ಒತ್ತಡ ಕಡಿಮೆ ಮಾಡುವುದು, ಮೊಬೈಲ್ ಅಪ್ ಲೋಡ್ ಸಮಸ್ಯೆ ಬಗೆಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ವಿಸ್ತೃತವಾಗಿ ಮಾತನಾಡಿದರು.

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳು ಹಾಗೂ ಗರ್ಭಿಣಿ, ಬಾಣಂತಿಯರ ಆರೋಗ್ಯ, ಪೌಷ್ಟಿಕ ಆಹಾರ, ಲಸಿಕೆ, ಶಿಕ್ಷಣ ಸೇರಿದಂತೆ ಸರ್ಕಾರದ ಹಲವು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದಾರೆ. ಆದರೂ ಅವರಿಗೆ ಸೂಕ್ತ ವೇತನ, ಸೌಲಭ್ಯಗಳು ಸಿಗುತ್ತಿಲ್ಲ. ಸರ್ಕಾರ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು.

ಸರ್ಕಾರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಪದ್ಮಾ,ವರಲಕ್ಷ್ಮಿ,ರಮಾದೇವಿ, ಸೈದಾಬಿ, ಸಿಐಟಿಯು ಮುಖಂಡರಾದ ಶರಣಬಸವ,ಕೆಜಿ ವಿರೇಶ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು
📲Get App