🔥 TRENDING 12 से 60 बार तक रंगीन रोशनी बिखेरने वा... Collector admits lapse in firecracker... ਹੱਕ ਦੀ ਆਵਾਜ਼ ਦੇ ਕੌਮੀ ਪ੍ਰਧਾਨ ਅਤੇ NEED 2... एमसीएचएन दिवस पर गर्भवती महिलाओं की हु... बरहरवा काली मंदिर में 20 सूत्रों के अध... भगवान पदमप्रभु का जन्म व तप कल्याणक मन...
07 Nov 2026•
ગુજરાતી मराठी ਪੰਜਾਬੀ বাংলা

ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಬಿ.ಪಿ. ಹರೀಶ್ ಆಕ್ರೋಶ

✍️ Reporter: Viswanatha D R 🗓 07 Nov 2026, 03:40 PM 👁 21
Watch on: 📘 Facebook
Share: 💬 WhatsApp 📘 Facebook 𝕏 Post
ದಾವಣಗೆರೆ, ನ. 7:-ಹಾಲು, ಮೊಸರು ಹಾಗೂ ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ದಾವಣಗೆರೆ ನಗರದ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಬಿಜೆಪಿ ಕಚೇರಿಯಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಾಸಕ ಬಿ.ಪಿ. ಹರೀಶ್ ಅವರು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಗರಾಜ್ ಮೆಳ್ಳಕಟ್ಟೆ, ಮಾಯಕೊಂಡದ ಮಾಜಿ ಶಾಸಕ ಬಸವರಾಜ್ ನಾಯ್ಕ, ಲೋಕಿಕೆರೆ ನಾಗರಾಜ್, ಮಾಡಾಳ್ ಮಲ್ಲಿಕಾರ್ಜುನ್, ಹನಗವಾಡಿ ವೀರೇಶ್, ಯಶವಂತ್ ರಾವ್ ಜಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಮಾಜಿ ಮಹಾನಗರ ಪಾಲಿಕೆ ಸದಸ್ಯರು, ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
📲Get App