ರೈತರು ಧರಣಿ ಅಂತ್ಯ
ಕಬ್ಬಿಗೆ ಸೂಕ್ತ ದರ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀಳಗಿಯಲ್ಲಿ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ 83 ವರ್ಷದ ವೃದ್ಧ ರೈತ ಮಲ್ಲಪ್ಪ ಅಪ್ಪಣ್ಣ ಬಾವಿ ಅವರು ಜಿಲ್ಲಾಧಿಕಾರಿಗಳು ನೀಡಿದ ಜ್ಯೂಸ್ ಕುಡಿಯುವ ಮೂಲಕ ತಮ್ಮ ಹೋರಾಟವನ್ನು ಅಂತ್ಯಗೊಳಿಸಿದ್ದಾರೆ. ಆರು ದಿನಗಳಿಂದ ಅನ್ನಾಹಾರ ತ್ಯಜಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತನನ್ನು ಮನವೊಲಿಸಲು ಜಿಲ್ಲಾಧಿಕಾರಿ ಸಂಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ, ಅವರೊಂದಿಗೆ ಮಾತುಕತೆ ನಡೆಸಿದರು. ರೈತರ ಬೇಡಿಕೆಗಳ ಕುರಿತು ಸರ್ಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಉಪವಾಸ ಅಂತ್ಯಗೊಳಿಸಿದರು