ಗಾಣಧಾಳ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಲು ನಿರ್ಣಯಗ್ರಾಮಸಭೆ ಹಾಗೂ ವಿಶೇಷ ಸಭೆಯಲ್ಲಿ ಒಮ್ಮತದ ಅಭಿಪ್ರಾಯ; ತಹಶೀಲ್ದಾರರಿಂದ ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಕೆ
Watch on:
📘 Facebook
**ದೇವದುರ್ಗ–ಅರಕೇರಾ ಬ್ರೇಕಿಂಗ್ ನ್ಯೂಸ್**
# ಗಾಣಧಾಳ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸಲು ನಿರ್ಣಯ
### ಗ್ರಾಮಸಭೆ ಹಾಗೂ ವಿಶೇಷ ಸಭೆಯಲ್ಲಿ ಒಮ್ಮತದ ಅಭಿಪ್ರಾಯ; ತಹಶೀಲ್ದಾರರಿಂದ ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಕೆ
**ರಾಯಚೂರು, ನ. 9:** ಅರಕೇರಾ ತಾಲೂಕಿಗೆ ಸೇರ್ಪಡೆಗೊಂಡಿರುವ ಗಾಣಧಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದು, ಈ ಸಂಬಂಧ ನಡೆದ ಗ್ರಾಮಸಭೆ ಹಾಗೂ ವಿಶೇಷ ಸಭೆಗಳಲ್ಲಿ ಮರುಸೇರ್ಪಡೆಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ.
ಅರಕೇರಾ ತಾಲೂಕು ತಹಶೀಲ್ದಾರರ ಕಚೇರಿಯಿಂದ 09-11-2026ರಂದು ಹೊರಡಿಸಿರುವ ಸಂ.ಸಂ.ತ.ಕಾ.ಯು.ADM/2026-27ರ ಅಧಿಕೃತ ಪತ್ರದ ಪ್ರಕಾರ, ಗಾಣಧಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 12-10-2026ರಂದು ನಡೆದ ಗ್ರಾಮಸಭೆ ಹಾಗೂ 04-11-2026ರಂದು ನಡೆದ ವಿಶೇಷ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.
ನಂತರ ನವೆಂಬರ್ 7ರಂದು ಗಣಧಾಳ ಗ್ರಾಮದಲ್ಲಿ ನಡೆದ ಗ್ರಾಮಸಭೆಯಲ್ಲಿ ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸುವಂತೆ ಗ್ರಾಮಸ್ಥರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗಣಧಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಣಧಾಳ, ಕಮ್ಮಲದಿನ್ನಿ, ಕಕ್ಕಲದೊಡ್ಡಿ ಹಾಗೂ ಸುಣ್ಣದಕಲ್ ಗ್ರಾಮಗಳ ಸುಮಾರು 1,600 ಜನಸಂಖ್ಯೆಯ ಗ್ರಾಮಸ್ಥರು ಈ ಬೇಡಿಕೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸುವುದರಿಂದ ಸಾರ್ವಜನಿಕರಿಗೆ ಆಡಳಿತಾತ್ಮಕ ಹಾಗೂ ಕಚೇರಿ ಕೆಲಸಗಳಿಗೆ ಅನುಕೂಲವಾಗಲಿದೆ. ಗ್ರಾಮಸ್ಥರ ಅಭಿಪ್ರಾಯ ಮತ್ತು ಸಾರ್ವಜನಿಕರ ಅನುಕೂಲತೆಯನ್ನು ಪರಿಗಣಿಸಿ, ಮುಂದಿನ ಅಗತ್ಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರು ರಾಯಚೂರು ವಿಭಾಗದ ಸಹಾಯಕ ಆಯುಕ್ತರಿಗೆ ವರದಿ ಸಲ್ಲಿಸಿದ್ದಾರೆ.
ಗ್ರಾಮಗಳನ್ನು ದೇವದುರ್ಗ ತಾಲೂಕಿಗೆ ಮರುಸೇರ್ಪಡೆಗೊಳಿಸುವ ಪ್ರಕ್ರಿಯೆ ಮುಂದಿನ ಹಂತಕ್ಕೆ ತಲುಪಿರುವುದು ಗ್ರಾಮಸ್ಥರಲ್ಲಿ ನಿರೀಕ್ಷೆ ಮೂಡಿಸಿದೆ.
**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**