🔥 TRENDING लखनऊ में 68,500 शिक्षक भर्ती आरक्षण घो... Rajasthan Election Commissioner scolds... આજરોજ તારીખ- ૧૪/૧૧/૨૦૨૬ ને શનિવાર ના ર... Video: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರ... ਗਲੀ ਵਿੱਚ ਖੇਡਦਾ ਹੋਇਆ ਢਾਈ ਸਾਲਾ ਬੱਚਾ ਸ਼ੱਕ... દાણીલીમડા વિસ્તારમાં લૂંટમાં આરોપીઓ ઝડ...
14 Nov 2026•
ગુજરાતી मराठी ਪੰਜਾਬੀ বাংলা

ಜಾಲಹಳ್ಳಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಚಾಲನೆಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶ; ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ

✍️ Reporter: Khaja Hussain 🗓 14 Nov 2026, 08:02 PM 👁 18
Share: 💬 WhatsApp 📘 Facebook 𝕏 Post
**ಜಾಲಹಳ್ಳಿ ಬ್ರೇಕಿಂಗ್ ನ್ಯೂಸ್**

# ಜಾಲಹಳ್ಳಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಚಾಲನೆ

### ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶ; ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ

**ಜಾಲಹಳ್ಳಿ, ನ.14:** ದೇವದುರ್ಗ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಕಾರ್ಯಾಲಯದ ವತಿಯಿಂದ ಜಾಲಹಳ್ಳಿಯ ಅಂಬಿಗರ ಚೌಡಯ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ–2026ಕ್ಕೆ ಶಾಸಕಿ ಕರೆಮ್ಮ ಜಿ. ನಾಯಕ ಅವರು ಗಿಡಕ್ಕೆ ನೀರುಣಿಸುವ ಮೂಲಕ ಚಾಲನೆ ನೀಡಿದರು.

ಕರ್ನಾಟಕ ಸರ್ಕಾರದ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಪ್ರಾರ್ಥನಾ ಗೀತೆ ಹಾಡಿದರು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ. ರಾಜಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕಿ ಕರೆಮ್ಮ ಜಿ. ನಾಯಕ, ಪ್ರತಿ ಶನಿವಾರ ತಮ್ಮ ನೇತೃತ್ವದಲ್ಲಿ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಜಾಸೇವಾ ಆಂದೋಲನವು ಸನ್ಮಾನ ಮಾಡಿಸಿಕೊಳ್ಳುವ ವೇದಿಕೆಯಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅವುಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವ ವೇದಿಕೆಯಾಗಿದೆ. ಜನರ ಸೇವೆ ಮಾಡುವುದೇ ನನ್ನ ಮುಖ್ಯ ಉದ್ದೇಶವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸಿ, ವಿಳಂಬ ಮಾಡದೆ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಆಡಳಿತದ ವತಿಯಿಂದ ಶಾಸಕಿ ಕರೆಮ್ಮ ಜಿ. ನಾಯಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿದ್ದ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.

**ಬಾಕ್ಸ್ ಸುದ್ದಿ**

### ಪ್ರಜಾಸೇವಾ ಆಂದೋಲನದಲ್ಲಿ 63 ಅರ್ಜಿ ಸ್ವೀಕಾರ; ರೈಲ್ವೆ ಮಾರ್ಗಕ್ಕೆ ಪತ್ರಕರ್ತರಿಂದ ಮನವಿ

ಜಾಲಹಳ್ಳಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಒಟ್ಟು 63 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಸಂದರ್ಭದಲ್ಲಿ ಪತ್ರಕರ್ತ ಖಾಜಾ ಹುಸೇನ್ ಬಾಬಾ ಅವರು ರಾಯಚೂರು–ದೇವದುರ್ಗ–ಬಿಜಾಪುರ ರೈಲ್ವೆ ಮಾರ್ಗ ನಿರ್ಮಾಣದ ಕುರಿತು ಶಾಸಕಿ ಕರೆಮ್ಮ ಜಿ. ನಾಯಕ ಅವರ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಮೂಲಕ ರೇಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಗಮನಕ್ಕೆ ತರಲಾಯಿತು .

ಮನವಿಗೆ ಸ್ಪಂದಿಸಿದ ಶಾಸಕಿ, ಈ ವಿಷಯವಾಗಿ ರೈಲ್ವೆ ಸಚಿವರಿಗೆ ಶೀಘ್ರದಲ್ಲೇ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಬೇಡಿಕೆಗಳಿಗೆ ಸಂಬಂಧಿಸಿದಂತೆ ಮನವಿ ಪತ್ರಗಳನ್ನು ಸಲ್ಲಿಸಿದರು.

**ಕಾರ್ಯಕ್ರಮದಲ್ಲಿ** ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಉಪಾಧ್ಯಕ್ಷ ವೀರೇಶ್ ಅರಕೇರಾ, ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಡಿ. ರಾಜಕುಮಾರ್, ಸಿಡಿಪಿಒ ಮಹೇಶ್ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ರಾಧಾದೇವಿ, ತಾಲೂಕು ಯೋಜನಾಧಿಕಾರಿ ಅಮರೇಶ್ ಕುಂಬಾರ, ತಾಲೂಕು ಆರೋಗ್ಯಾಧಿಕಾರಿ ಡಾ. ಬನದೇಶ್ವರ, ಅಬಕಾರಿ ಅಧಿಕಾರಿ ವಿಠ್ಠಲ್, ಜಾಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ವೈಶಾಲಿ ಜಳಕಿ, ಜಾಲಹಳ್ಳಿ ಕಂದಾಯ ನಿರೀಕ್ಷಕಿ ದೇವಿ ರೆಡ್ಡಿ, ಉಪತಹಸೀಲ್ದಾರ್ ಗೋವಿಂದಪ್ಪ ಸೇರಿದಂತೆ ತಾಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App