🔥 ट्रेंडिंग पीएम मोदी करेंगे नीतीश सेतु का लोकार्प... जबलपुर में पुलिसकर्मी पर चाकू हमला, चा... मध्यप्रदेश भाजपा ने संगठन में नई जमावट... यूपीएससी ने भेजे तीन नाम, मध्यप्रदेश क... राजस्थान पंचायत चुनाव में कांग्रेस की... ಗ್ರಾಮ ಸಂಪರ್ಕ ಕಾರ್ಯಕ್ರಮ: ಗಡಿಭಾಗದ ಜನರಿಗೆ...
20 नव. 2026•
ગુજરાતી मराठी ਪੰਜਾਬੀ বাংলা
खेल

ಬ್ರೀಮ್ಸ್ನಲ್ಲಿ ಐದು ವರ್ಷ ಮೇಲ್ಪಟ್ಟ ಗ್ರೂಪ್ ಡಿ ಸಿಬ್ಬಂದಿ ಬಿಡುಗಡೆಗೆ ಒತ್ತಾಯ

✍️ रिपोर्टर: Basavaraj pujari 🗓 20 नव. 2026, 09:45 PM 👁 21
शेयर करें: 💬 WhatsApp 📘 Facebook 𝕏 Post

ಬೀದರ್: ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರೀಮ್ಸ್)ನಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಡಿ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ಬಿಡುಗಡೆ ಮಾಡುವಂತೆ ಕಲ್ಯಾಣ ಕರ್ನಾಟಕ ನಿರ್ಮಾಣ

ಬ್ರೀಮ್ಸ್ನಲ್ಲಿ ಐದು ವರ್ಷ ಮೇಲ್ಪಟ್ಟ ಗ್ರೂಪ್ ಡಿ ಸಿಬ್ಬಂದಿ ಬಿಡುಗಡೆಗೆ ಒತ್ತಾಯ


ಬೀದರ್: ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರೀಮ್ಸ್)ನಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಡಿ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ಬಿಡುಗಡೆ ಮಾಡುವಂತೆ ಕಲ್ಯಾಣ ಕರ್ನಾಟಕ ನಿರ್ಮಾಣ ಸೇವೆ ಒತ್ತಾಯಿಸಿ ಇಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಸ್ವಾಮಿದಾಸ ಕೆಂಪೆನೋರ ಅವರು ಬ್ರೀಮ್ಸ್ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ.
ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರು 2025ರ ಡಿಸೆಂಬರ್ 19ರಂದು ಹೊರಡಿಸಿದ ಆದೇಶದಂತೆ ಐದು ವರ್ಷಕ್ಕಿಂತ ಹೆಚ್ಚು ಅವಧಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಡಿ ಸಿಬ್ಬಂದಿಯನ್ನು ಮಾತೃ ಇಲಾಖೆಗೆ ಬಿಡುಗಡೆ ಮಾಡಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಆದೇಶದ ಹಿನ್ನೆಲೆಯಲ್ಲಿ ಬ್ರೀಮ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 12 ಸಿಬ್ಬಂದಿಗಳ ಪಟ್ಟಿಯನ್ನು ನಿರ್ದೇಶಕರ ಕಚೇರಿಗೆ ಕಳುಹಿಸಲಾಗಿತ್ತು. ಅವರಲ್ಲಿ 11 ಜನರನ್ನು ಬಿಡುಗಡೆ ಮಾಡಲಾಗಿದ್ದು, 2016ರ ಏಪ್ರಿಲ್ 2ರಿಂದ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಡಿ ಸಿಬ್ಬಂದಿ ಪ್ರೇಮ ಹಾವೆ ಅವರನ್ನು ಮಾತ್ರ ಬಿಡುಗಡೆ ಮಾಡಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಅಲ್ಲದೆ, ಗ್ರೂಪ್ ಡಿ ಹುದ್ದೆಯಲ್ಲಿ ನೇಮಕಗೊಂಡಿರುವ ಸಿಬ್ಬಂದಿಗೆ ಯಾವ ಆದೇಶದ ಆಧಾರದ ಮೇಲೆ ಎಕ್ವಿಪ್‌ಮೆಂಟ್ ಎಂಜಿನಿಯರ್ ಜವಾಬ್ದಾರಿ ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಈ ಹುದ್ದೆಯ ನಿರ್ವಹಣೆಯಲ್ಲಿ ಆರ್ಥಿಕ ಅವ್ಯವಹಾರ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಆರೋಪಿಸಿರುವ ಅವರು, ಈ ಕುರಿತು ಸಮಗ್ರ ತನಿಖೆ ನಡೆಸುವಂತೆಯೂ ಒತ್ತಾಯಿಸಿದ್ದಾರೆ.

ಗ್ರೂಪ್ ಡಿ ಸಿಬ್ಬಂದಿಗೆ ನಿಯಮಾನುಸಾರವಲ್ಲದ ಹುದ್ದೆಯ ಜವಾಬ್ದಾರಿ ನೀಡಿರುವುದರ ಔಚಿತ್ಯವೇನು ಮತ್ತು ಇದಕ್ಕೆ ಸಂಬAಧಿಸಿದAತೆ ಯಾವುದೇ ಅಹಿತಕರ ಘಟನೆ ಸಂಭವಿಸಿದರೆ ಹೊಣೆಗಾರರು ಯಾರು ಎಂಬ ಪ್ರಶ್ನೆಯನ್ನೂ ಎತ್ತಿದ್ದಾರೆ.

ಆದ್ದರಿಂದ ಸಂಬAಧಪಟ್ಟ ಸಿಬ್ಬಂದಿಯನ್ನು ತಕ್ಷಣವೇ ಮಾತೃ ಇಲಾಖೆಗೆ ಬಿಡುಗಡೆಗೊಳಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬ್ರೀಮ್ಸ್ ಆಸ್ಪತ್ರೆಯ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸ್ವಾಮಿದಾಸ ಕೆಂಪೆನೋರ ಎಚ್ಚರಿಸಿದ್ದಾರೆ.
📲Get App