🔥 TRENDING Farmers Insist On Release Of 2.5 TMC o... चंद्रपुरातील स्नेहा फूड्सवर आयकराची धा... PM Modi Attends Shabad Kirtan in Delhi... AAP's Punjab Landslide Victory Faces T... ਸ੍ਰੀ ਗੁਰੂ ਨਾਨਕ ਦੇਵ ਜੀ ਦੇ ਪ੍ਰਕਾਸ਼ ਪੁਰਬ ਸ... हजारीबाग में एसपी अमन कुमार ने अपराध स...
23 Nov 2026•
ગુજરાતી मराठी ਪੰਜਾਬੀ বাংলা

ಕ್ಲಸ್ಟರ್ ಕಿಚನ್ ಸೆಂಟರ್‌ ಸ್ಥಾಪಿಸುವುದಿಲ್ಲ...!

✍️ Reporter: Ningappa 🗓 23 Nov 2026, 10:27 PM 👁 13
Share: 💬 WhatsApp 📘 Facebook 𝕏 Post
ಕ್ಲಸ್ಟರ್ ಕಿಚನ್ ಸೆಂಟರ್‌ ಸ್ಥಾಪಿಸುವುದಿಲ್ಲ...!

ಬೆಂಗಳೂರು: ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್. ಬಾಲನ್ ಅವರ ನೇತೃತ್ವದ ನಿಯೋಗ ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಂಡಿತು. ಈ ಸಂದರ್ಭದಲ್ಲಿ ಬಿಸಿಯೂಟ ತಯಾರಕರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಯಾವುದೇ ಕಾರಣಕ್ಕೂ ಕ್ಲಸ್ಟರ್ ಕಿಚನ್ ಸೆಂಟರ್‌ಗಳನ್ನು (ಕೇಂದ್ರೀಕೃತ ಅಡುಗೆ ಕೇಂದ್ರ) ಸ್ಥಾಪಿಸುವುದಿಲ್ಲ. ಈ ಬಗ್ಗೆ ಬಿಸಿಯೂಟ ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.

ವೇತನ ಹೆಚ್ಚಳದ ಕುರಿತು ನಿಯೋಗ ಮಾಡಿಕೊಂಡ ಮನವಿಯ ಕುರಿತು ಪ್ರತಿಕ್ರಿಯಿಸಿ, ಈ ವಿಷಯದಲ್ಲಿ ನಾನೊಬ್ಬನೇ ತೀರ್ಮಾನಿಸಲು ಸಾಧ್ಯವಿಲ್ಲ. ಈ ಕುರಿತು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಖಂಡಿತವಾಗಿಯೂ ಚರ್ಚಿಸಿ, ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ. ಬಿಸಿಯೂಟ ನೀಡುವ ʻಪಿಎಂ ಪೋಷಣ್ʼ (PM POSHAN - ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್) ಎಂಬ ಈ ಯೋಜನೆ ಕೇವಲ ರಾಜ್ಯ ಸರ್ಕಾರದ ಯೋಜನೆಯಲ್ಲ. ಕೇಂದ್ರ ಸರ್ಕಾರವೂ ಇದಕ್ಕೆ ಅನುದಾನ ನೀಡುತ್ತದೆ. ಹೀಗಾಗಿ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೇಂದ್ರ ಸರ್ಕಾರದ ಮೇಲೆಯೂ ಒತ್ತಡ ಹೇರಬೇಕು ಎಂದು ನಿಯೋಗಕ್ಕೆ ಸಲಹೆ ನೀಡಲಾಯಿತು.

ಮಕ್ಕಳಿಗೆ ಪೌಷ್ಟಿಕವಾದ ಆಹಾರ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಲ್ಲಿ ರಾಜಿಯ ಮಾತೇ ಇಲ್ಲ. ಒಂದು ವೇಳೆ ಕಳಪೆ ಗುಣಮಟ್ಟದ ಆಹಾರ ಧಾನ್ಯಗಳನ್ನು ಒದಗಿಸುತ್ತಿರುವುದು ಕಂಡು ಬಂದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ಬಸಿಯೂಟ ತಯಾರಕರ ಸಹಕಾರವೂ ಅಗತ್ಯ ಎಂದು ತಿಳಿಸಿದೆ.

ಪ್ರತಿಭಟನೆ ನಿಮ್ಮ ಹಕ್ಕು. ಆದರೆ ದಯವಿಟ್ಟು, ಈಗ ಪ್ರತಿಭಟನೆ ಬೇಡ. ಸರ್ಕಾರ ನಿಮ್ಮ ಜೊತೆಗಿದೆ. ಆದ್ಯತೆಯ ಮೇಲೆ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ. ನಾವೆಲ್ಲರೂ ಸೇರಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಈ ಪುಣ್ಯದ ಕಾರ್ಯ ಮುಂದುವರಿಸೋಣ ಎಂದು ನಿಯೋಗಕ್ಕೆ ಮನವಿ ಮಾಡಿಕೊಂಡರು.

ಈ ನಿಯೋಗದಲ್ಲಿ ರಾಜ್ಯ ಸಮಿತಿ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ, ಪ್ರಧಾನ ಕಾರ್ಯದರ್ಶಿ ಕಲ್ಪನಾ ವಿ.ಜಿ., ಖಜಾಂಚಿ ಪುಷ್ಪಲತಾ ಸೇರಿದಂತೆ ಯೂನಿಯನ್‌ನ ಇತರ ಪದಾಧಿಕಾರಿಗಳು ಇದ್ದರು.
📲Get App