🔥 TRENDING ಗೌರಿ ಹುಣ್ಣಿಮೆಯಂದು ಮಾರಿಕೊಪ್ಪದ ಶ್ರೀ ಹಳದಮ... ଧାରଣାରେ ବସିଛନ୍ତି କୋଣାର୍କ ସୂର୍ଯ୍ୟ ମନ୍ଦି... ପାରାଦ୍ଵୀପର 'କଳିଙ୍ଗ ବାଲିଯାତ୍ରା-୨୦୨୬'ର ଉ... କାର୍ତ୍ତିକ ପୂର୍ଣ୍ଣିମାରେ ଶ୍ରୀକ୍ଷେତ୍ର ଜନସ... High Court Lets 3 Haryana Employees Sh... Elephant Ramps Through Village, Smashe...
24 Nov 2026•
ગુજરાતી मराठी ਪੰਜਾਬੀ বাংলা

ನಿಗದಿತ ಕಾಲಮಿತಿಯಲ್ಲಿ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಪೂವಿತಾ ಎಸ್. ಸೂಚನೆ

✍️ Reporter: Ningappa 🗓 24 Nov 2026, 02:32 PM 👁 14
Share: 💬 WhatsApp 📘 Facebook 𝕏 Post
ರಾಯಚೂರು, ನ. 24: ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ರಾಯಚೂರು ನಗರದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ, ನಗರದಲ್ಲಿ ಪ್ರಗತಿಯಲ್ಲಿರುವ ಹಾಗೂ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ, ನಗರದಲ್ಲಿ ಕೈಗೊಳ್ಳಲಾಗುತ್ತಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಹಾಗೂ ಯಾವುದೇ ಕಾಮಗಾರಿಗಳು ಅನಗತ್ಯವಾಗಿ ಬಾಕಿ ಉಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೆ, ಯಾವುದೇ ಸಮಂಜಸ ಕಾರಣವಿಲ್ಲದೆ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಾಪಾತ್ರ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
📲Get App