स्वास्थ्य
ಖಾಸಗಿ ಆಸ್ಪತ್ರೆಗಳ, ಕ್ಲಿನಿಕ್ಗಳ ಚಿಕಿತ್ಸೆಯ ದರಪಟ್ಟಿ ಕಡ್ಡಾಯಗೊಳಿಸಿ
ನೋಂದಣಿಯಾಗದ ಆಸ್ಪತ್ರೆ ಹಾಗೂ ಕ್ಲೀನಿಕ್ಗಳ ವಿರುದ್ಧ ಕ್ರಮಕ್ಕೆ ಸಚಿವರಿಗೆ ರಾಜಶೇಖರ್ ಜವಳೆ ಒತ್ತಾಯ..... ಬೀದರ: ಸಾರ್ವಜನಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ತಮ್ಮ ಗಮನಕ್ಕೆ ತರಬಯಸುವುದೇನೆಂದರೆ, ಕರ್ನಾಟಕ ರಾಜ್ಯದ ನ
ಖಾಸಗಿ ಆಸ್ಪತ್ರೆಗಳ, ಕ್ಲಿನಿಕ್ಗಳ ಚಿಕಿತ್ಸೆಯ ದರಪಟ್ಟಿ ಕಡ್ಡಾಯಗೊಳಿಸಿ
ನೋಂದಣಿಯಾಗದ ಆಸ್ಪತ್ರೆ ಹಾಗೂ ಕ್ಲೀನಿಕ್ಗಳ ವಿರುದ್ಧ ಕ್ರಮಕ್ಕೆ ಸಚಿವರಿಗೆ ರಾಜಶೇಖರ್ ಜವಳೆ ಒತ್ತಾಯ.....
ಬೀದರ: ಸಾರ್ವಜನಿಕರ ಆರೋಗ್ಯ ಮತ್ತು ಹಿತದೃಷ್ಟಿಯಿಂದ ತಮ್ಮ ಗಮನಕ್ಕೆ ತರಬಯಸುವುದೇನೆಂದರೆ, ಕರ್ನಾಟಕ ರಾಜ್ಯದ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೂರಾರು ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳು ಕಾರ್ಯನಿರ್ವಹಿಸುತ್ತಿವೆ. ಆದರೆ ಕೆಲವು ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳಲ್ಲಿ ಚಿಕಿತ್ಸೆಯ ದರಗಳು, ವೈದ್ಯರ ಸಮಾಲೋಚನಾ ಶುಲ್ಕ, ವಿವಿಧ ವೈದ್ಯಕೀಯ ಪರೀಕ್ಷೆಗಳ ಶುಲ್ಕ, ಶಸ್ತç ಚಿಕಿತ್ಸೆ, ಹಾಸಿಗೆ ಬಾಡಿಗೆ ಹಾಗೂ ಇತರೆ ವೈದ್ಯಕೀಯ ಸೇವೆಗಳ ದರಗಳ ಬಗ್ಗೆ ರೋಗಿಗಳಿಗೆ ಸ್ಪಷ್ಟವಾದ ಮಾಹಿತಿ ದೊರೆಯುತ್ತಿಲ್ಲ ಎಂದು ಜೆ.ಡಿ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ್ ಜವಳೆ ಅವರು ಜಿಲ್ಲಾಧಿಕಾರಿಗಳ ಮುಖಾಂತರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಚಿವರಾದ ಯು.ಟಿ. ಖಾದರ್ ಅವರಿಗೆ, ಸಲ್ಲಿಸಿದ ಮನವಿ ಪತ್ರದಲ್ಲಿ ಅವರು ತಿಳಿಸಿದ್ದಾರೆ.
ಬಡವರು, ಮಧ್ಯಮ ವರ್ಗದವರು ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಅನಾರೋಗ್ಯಕ್ಕೆ ಒಳಗಾದಾಗ ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಾರೆ. ಇಂತಹ ಸಂದರ್ಭದಲ್ಲಿ ಕೆಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವೆಚ್ಚದ ಬಗ್ಗೆ ಮೊದಲೇ ಮಾಹಿತಿ ನೀಡದಿರುವುದರಿಂದ ರೋಗಿಗಳು ಮತ್ತು ಅವರ ಕುಟುಂಬದವರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಆಸ್ಪತ್ರೆಗೆ ಬರುವ ಪ್ರತಿಯೊಬ್ಬ ರೋಗಿಗೂ ಚಿಕಿತ್ಸೆ ಪಡೆಯುವ ಹಕ್ಕಿದೆ. ಅದೇ ರೀತಿ ಚಿಕಿತ್ಸೆಗಾಗಿ ಎಷ್ಟು ಹಣ ಪಾವತಿಸಬೇಕು ಎಂಬುದನ್ನು ಮುಂಚಿತವಾಗಿ ತಿಳಿದುಕೊಳ್ಳುವ ಹಕ್ಕು ಕೂಡ ಇದೆ. ಆದ್ದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ದರಗಳ ಪಾರದರ್ಶಕತೆ ಕಡ್ಡಾಯವಾಗಬೇಕು. ಆಸ್ಪತ್ರೆ ಹಾಗೂ ಕ್ಲಿನಿಕ್ ಮುಂದೆ ದರಪಟ್ಟಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಕರ್ನಾಟಕ ರಾಜ್ಯದ ಪ್ರತಿಯೊಂದು ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳ ಪ್ರವೇಶದ್ವಾರದ ಬಳಿ ಸಾರ್ವಜನಿಕರಿಗೆ ಸುಲಭವಾಗಿ ಕಾಣುವ ಸ್ಥಳದಲ್ಲಿ ದರಪಟ್ಟಿಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದರಲ್ಲಿ ವೈದ್ಯರ ಸಮಾಲೋಚನಾ ಶುಲ್ಕ, ಹೊರರೋಗಿಗಳ ಶುಲ್ಕ, ಒಳರೋಗಿಗಳ ಶುಲ್ಕ, ಹಾಸಿಗೆ ಬಾಡಿಗೆ, ವಿವಿಧ ರಕ್ತ ಪರೀಕ್ಷೆಗಳು, ಸ್ಕ್ಯಾನಿಂಗ್, ಎಕ್ಸ್ರೇ, ಸಿಟಿ ಸ್ಕ್ಯಾನ್, ಎಂಆರ್ಐ, ಶಸ್ತ್ರಚಿಕಿತ್ಸೆ, ಹೆರಿಗೆ ಸೇವೆ, ತುರ್ತು ಚಿಕಿತ್ಸಾ ಶುಲ್ಕ ಹಾಗೂ ಇತರೆ ವೈದ್ಯಕೀಯ ಸೇವೆಗಳ ದರಗಳನ್ನು ಸ್ಪಷ್ಟವಾಗಿ ನಮೂದಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರತಿಯೊಂದು ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ ಕಡ್ಡಾಯವಾಗಿ ನೋಂದಣಿಯಾಗಬೇಕು. ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಮ್, ಬಹುವಿಶೇಷ ಆಸ್ಪತ್ರೆ, ಸಣ್ಣ ಆಸ್ಪತ್ರೆ ಹಾಗೂ ಕ್ಲಿನಿಕ್ಗಳು ಸಂಬAಧಪಟ್ಟ ಕಾನೂನು ಮತ್ತು ಸರ್ಕಾರದ ನಿಯಮಗಳ ಪ್ರಕಾರ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ನೋಂದಣಿ ಪ್ರಮಾಣಪತ್ರವನ್ನು ಆಸ್ಪತ್ರೆಯ ಪ್ರವೇಶದ್ವಾರದಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ನೋಂದಣಿ ಇಲ್ಲದೆ ಅಥವಾ ಅಗತ್ಯ ಅನುಮತಿಗಳಿಲ್ಲದೆ ಆಸ್ಪತ್ರೆ ಹಾಗೂ ಕ್ಲಿನಿಕ್ ನಡೆಸುತ್ತಿರುವವರನ್ನು ಗುರುತಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಅವರು ಅಗ್ರಹಿಸಿದ್ದಾರೆ.
ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ವಿಶೇಷ ಪರಿಶೀಲನಾ ಕಾರ್ಯಾಚರಣೆ ನಡೆಸಬೇಕು. ನೋಂದಣಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಆಸ್ಪತ್ರೆ ಹಾಗೂ ಕ್ಲಿನಿಕ್ಗಳನ್ನು ಗುರುತಿಸಿ, ಸಂಬAಧಪಟ್ಟ ಕಾನೂನಿನ ಪ್ರಕಾರ ನೋಟಿಸ್ ನೀಡುವುದು, ದಂಡ ವಿಧಿಸುವುದು, ನೋಂದಣಿ ನಿರಾಕರಿಸುವುದು ಅಥವಾ ರದ್ದುಪಡಿಸುವುದು ಹಾಗೂ ಅಗತ್ಯವಿದ್ದಲ್ಲಿ ಕಾನೂನುಬದ್ಧವಾಗಿ ಕಾರ್ಯಾಚರಣೆ ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬೇಕು.
ವೈದ್ಯರು ರೋಗಿಗಳಿಂದ ಹೆಚ್ಚುವರಿ ಹಣ ವಸೂಲಿ ಮಾಡುವುದನ್ನು ತಡೆಯಬೇಕು ಸರ್ಕಾರದ ನಿಯಮಗಳು, ಅನ್ವಯಿಸುವ ದರನಿಯಂತ್ರಣ ಮತ್ತು ರೋಗಿಗೆ ನೀಡಿದ ಚಿಕಿತ್ಸಾ ಅಂದಾಜಿನ ಪ್ರಕಾರವೇ ಶುಲ್ಕ ವಸೂಲಿ ಮಾಡಬೇಕು. ಚಿಕಿತ್ಸೆ ಆರಂಭಿಸುವ ಮೊದಲು ಸಾಧ್ಯವಾದಷ್ಟು ಚಿಕಿತ್ಸೆಯ ಅಂದಾಜು ವೆಚ್ಚವನ್ನು ರೋಗಿ ಅಥವಾ ಅವರ ಕುಟುಂಬದವರಿಗೆ ಲಿಖಿತವಾಗಿ ನೀಡಬೇಕು. ಚಿಕಿತ್ಸೆಯ ನಂತರ ಪ್ರತಿಯೊಂದು ವೆಚ್ಚಕ್ಕೂ ಅಧಿಕೃತ ಬಿಲ್ ನೀಡುವುದನ್ನು ಕಡ್ಡಾಯಗೊಳಿಸಬೇಕು. ಜಿಲ್ಲಾ ಮಟ್ಟದಲ್ಲಿ ವಿಶೇಷ ಮೇಲ್ವಿಚಾರಣಾ ಸಮಿತಿ ರಚಿಸಬೇಕು. ಪ್ರತಿಯೊಂದು ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳ ನೋಂದಣಿ, ದರಪಟ್ಟಿ ಪ್ರದರ್ಶನ, ವೈದ್ಯಕೀಯ ಸೌಲಭ್ಯಗಳು ಮತ್ತು ಸಾರ್ವಜನಿಕರಿಂದ ಬರುವ ದೂರುಗಳನ್ನು ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ನಿಯಮಿತ ತಪಾಸಣೆ ಕಡ್ಡಾಯಗೊಳಿಸಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾಲಕಾಲಕ್ಕೆ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕೇವಲ ಕಾಗದದ ಮೇಲಿನ ನೋಂದಣಿಗೆ ಸೀಮಿತವಾಗದೆ, ಆಸ್ಪತ್ರೆಗಳು ನಿಜವಾಗಿಯೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿವೆಯೇ ಎಂಬುದನ್ನು ಖಚಿತಪಡಿಸಬೇಕು. ರೋಗಿಗಳ ಹಿತದೃಷ್ಟಿಯಿಂದ ತಾವುಗಳು ಸಂಬAಧಪಟ್ಟ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.