🔥 TRENDING Manipur CM visits Kangpokpi women's ma... Meghalaya rapper REBLE struck by drone... EAM Jaishankar Urges IORA Nations to S... Meghalaya Teachers Demand Invitation t... BJP and CPI(M) candidates share scoote... बड़ी खबर यह है पोकरण का विकास आप देख र...
27 Nov 2026•
ગુજરાતી मराठी ਪੰਜਾਬੀ বাংলা
Politics

ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಿ-ಅನೀಲಕುಮಾರ ಬೆಲ್ದಾರ

✍️ Reporter: Basavaraj pujari 🗓 27 Nov 2026, 05:32 PM 👁 17
Share: 💬 WhatsApp 📘 Facebook 𝕏 Post

ಬೀದರ್: ಭಾರತೀಯ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಸ್ವಾತಂತ್ರ‍್ಯ ಮತ್ತು ನ್ಯಾಯ ಒದಗಿಸುವ ಮಹತ್ವದ ಗ್ರಂಥವಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಸಂವಿಧಾನವನ್ನು

ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಿ-ಅನೀಲಕುಮಾರ ಬೆಲ್ದಾರ

ಬೀದರ್: ಭಾರತೀಯ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದ್ದು, ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು, ಸ್ವಾತಂತ್ರ‍್ಯ ಮತ್ತು ನ್ಯಾಯ ಒದಗಿಸುವ ಮಹತ್ವದ ಗ್ರಂಥವಾಗಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಸಂವಿಧಾನವನ್ನು ಓದುವ ಮೂಲಕ ಅದರ ಆಶಯ ಹಾಗೂ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಸೋಪ್ & ಡಿಟರ್ಜೆಂಟ್ ಲಿಮಿಟೆಡ್‌ನ ನಿರ್ದೇಶಕ ಅನೀಲಕುಮಾರ ಬೆಲ್ದಾರ ಹೇಳಿದರು.

ನಗರದ ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ನವೆಂಬರ್ 26ರಂದು ಸಂವಿಧಾನ ಅಂಗೀಕಾರ ದಿನದ ಅಂಗವಾಗಿ ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಸಾಂಸ್ಕೃತಿಕ ಸಂಘ, ಆಣದೂರು ಆಶ್ರಯದಲ್ಲಿ ಭೀಮರಾಜ ಸಾಹಿತ್ಯ ಪರಿಷತ್ ತಂಡದ ವತಿಯಿಂದ ಸಾಂಸ್ಕೃತಿಕ ಆಯೋಜಿಸಲಾಗಿತ್ತು.
ಕಾರ್ಯಕ್ರಮವು ಪೂಜ್ಯ ಭಂತೆ ಧಮ್ಮಜ್ಯೋತಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಿತು. ವಿಶ್ವಜ್ಞಾನಿ ಡಾ. ಬಿ.ಆರ್. ಅಂಬೇಡ್ಕರ್ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸುಭಾಷ ಜ್ಯೋತಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಾಬು ಪಾಸ್ವಾನ್, ವಿಠಲದಾಸ ಪ್ಯಾಗೆ, ಶಿವಕುಮಾರ ನೀಲಿಕಟ್ಟಿ, ಶ್ರೀಪತರಾವ ದೀನೆ, ಶೇಷರಾವ ಬೆಳಕುಣಿಕರ್ ಹಾಗೂ ಅಂಬಾದಾಸ ಗಾಯಕವಾಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಂಬಾದಾಸ ಗಾಯಕವಾಡ ಕಾರ್ಯಕ್ರಮ ನಿರೂಪಿಸಿದರು. ಸಾಹಿತಿ ರಮೇಶ ಬಾಬು ವಂದನಾರ್ಪಣೆ ಮಾಡಿದರು. ಸಂವಿಧಾನದ ಮಹತ್ವ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ಸಂಪನ್ನಗೊAಡಿತು.
📲Get App