🔥 TRENDING Congress Blames ZPM Government for 'Si... Delimitation Bill Mandates EC to Redra... A.R. Rahman's Acting Debut Under Scrut... ବାବା ଚନ୍ଦନେଶ୍ୱର ମନ୍ଦିର ପ୍ରାଙ୍ଗଣରେ ବିଶା... Tawang Agri Fair Opens, Emphasizing Sc... Five‑storey Building in Aizawl Gutted...
28 Nov 2026•
ગુજરાતી मराठी ਪੰਜਾਬੀ বাংলা

ಬಂಡೊಳ್ಳಿಯಲ್ಲಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ನಿರ್ಮಾಣಕ್ಕೆ ಭೂಮಿಪೂಜೆಕಲ್ಯಾಣ ಕರ್ನಾಟಕ ಭಾಗದ ವಾಲ್ಮೀಕಿ ಸಮಾಜದ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹೊಸ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

✍️ Reporter: Khaja Hussain 🗓 28 Nov 2026, 09:38 PM 👁 10
Share: 💬 WhatsApp 📘 Facebook 𝕏 Post
**ಸುರಪುರ ಬ್ರೇಕಿಂಗ್ ನ್ಯೂಸ್**

# ಬಂಡೊಳ್ಳಿಯಲ್ಲಿ ವಾಲ್ಮೀಕಿ ಗುರುಪೀಠದ ಶಾಖಾ ಮಠ ನಿರ್ಮಾಣಕ್ಕೆ ಭೂಮಿಪೂಜೆ

### ಕಲ್ಯಾಣ ಕರ್ನಾಟಕ ಭಾಗದ ವಾಲ್ಮೀಕಿ ಸಮಾಜದ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಹೊಸ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ

**ಸುರಪುರ, ನ.28:** ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಂಡೊಳ್ಳಿ ಗ್ರಾಮದಲ್ಲಿ ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಟ್ರಸ್ಟ್ ವತಿಯಿಂದ ನೂತನ ಶಾಖಾ ಮಠ, ವಸತಿ ನಿಲಯ, ಸಮುದಾಯ ಭವನ ಹಾಗೂ ಶೈಕ್ಷಣಿಕ ಸೌಲಭ್ಯಗಳ ನಿರ್ಮಾಣಕ್ಕೆ ಶನಿವಾರ ಭೂಮಿಪೂಜೆ ಮತ್ತು ಅಡಿಗಲ್ಲು ಸಮಾರಂಭ ನೆರವೇರಿತು.



ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದರು. ರಾಜನಹಳ್ಳಿ ಶ್ರೀಮಠದ ಪರಮಪೂಜ್ಯ ಪ್ರಸನ್ನಾನಂದ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭ ಜರುಗಿತು.

ಅಡಿಗಲ್ಲು ಸಮಾರಂಭದ ಬಳಿಕ ನಡೆದ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಲ್ಯಾಣ ಕರ್ನಾಟಕ ಭಾಗದ ವಾಲ್ಮೀಕಿ ಸಮಾಜದ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಈ ಶಾಖಾ ಮಠದ ನಿರ್ಮಾಣ ಮಹತ್ವದ ಹೆಜ್ಜೆಯಾಗಲಿದೆ ಎಂದರು.

ಸಮಾಜದ ಅಭಿವೃದ್ಧಿಗೆ ಸ್ವಂತ ಶಕ್ತಿಯಿಂದ ಮುನ್ನಡೆಯುವುದರ ಜೊತೆಗೆ ಸಮುದಾಯದ ಸಹಕಾರವೂ ಅತ್ಯಗತ್ಯವಾಗಿದೆ. ಸ್ವಾಮೀಜಿಯವರ ಹೋರಾಟದ ಫಲವಾಗಿ ಶೇ.7ರ ಮೀಸಲಾತಿ ದೊರೆತಿದ್ದರೂ, ನ್ಯಾಯಾಲಯದ ತಡೆಯಾಜ್ಞೆಯಿಂದಾಗಿ ಅದು ಜಾರಿಯಾಗದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಜಾರಿಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದರು.

ಮೀಸಲಾತಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ 9ನೇ ಅನುಸೂಚಿಯಲ್ಲಿ ಸೇರಿಸುವ ಅವಕಾಶವಿದ್ದು, ಈ ಸಂಬಂಧ ಸರ್ವಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕೊಂಡೊಯ್ಯಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.



### ಸಮಾಜಕ್ಕೆ ಸಿಗುವ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತೇವೆ: ಸಚಿವ ರಘುಮೂರ್ತಿ

ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ ಮಾತನಾಡಿ, ರಾಜ್ಯ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಸಮಾಜ ಶೈಕ್ಷಣಿಕವಾಗಿ ಇನ್ನಷ್ಟು ಮುಂದುವರಿಯಬೇಕು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಯುವಜನರು ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ಏರುವ ಸಾಮರ್ಥ್ಯ ಸತೀಶ್ ಜಾರಕಿಹೊಳಿ ಅವರಿಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.



ಸ್ವಾಮೀಜಿಯವರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಸಂಸದ ಜಿ. ಕುಮಾರ್ ನಾಯಕ

ಸಂಸದ ಜಿ. ಕುಮಾರ್ ನಾಯಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಮೀಜಿಯವರ ಸಮಾಜಮುಖಿ ಕಾರ್ಯಗಳು ಶ್ಲಾಘನೀಯವಾಗಿದ್ದು, ಸಮಾಜದ ಅಭಿವೃದ್ಧಿ ಕಾರ್ಯಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಬೇಕು ಎಂದರು.

ತಿಂತಿಣಿ ಬ್ರಿಡ್ಜ್ ಸಮೀಪ ರೈಲ್ವೆ ಹಳಿ ಹಾದುಹೋಗುವ ಪ್ರದೇಶದಲ್ಲಿ ನೂತನ ಸೇತುವೆ ನಿರ್ಮಿಸುವ ಕಾರ್ಯಕ್ಕೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವರಧಾನೇಶ್ವರ ಸ್ವಾಮೀಜಿ, ಶಾಸಕ ರಾಜಾ ವೇಣುಗೋಪಾಲ ನಾಯಕ, ಶಾಸಕ ದೇವೇಂದ್ರಪ್ಪ, ಅನ್ನಪೂರ್ಣ ಈ. ತುಕಾರಾಂ, ಚಿಕ್ಕ ಮಾಧು, ಶರಣಗೌಡ ಬಯ್ಯಾಪುರ, ಮಾಜಿ ಸಂಸದ ಬಿ.ವಿ. ನಾಯಕ, ಮಾಜಿ ಶಾಸಕರಾದ ರಾಜುಗೌಡ, ಗಂಗಾಧರ ನಾಯಕ, ಪ್ರತಾಪಗೌಡ ಪಾಟೀಲ್, ಶ್ರೀದೇವಿ ನಾಯಕ, ಮಮತಾ ದೊರೆ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

**ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ**
📲Get App